ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಿ ತೀರ್ಮಾನ: ದಿನೇಶ್ ಗುಂಡೂರಾವ್

Update: 2018-10-06 14:19 GMT

ಬೆಂಗಳೂರು, ಅ. 6: ಪಿತೃಪಕ್ಷ ಮುಗಿಯುತ್ತಿದ್ದಂತೆ ಸಂಪುಟ ವಿಸ್ತರಣೆಗೆ ತೀರ್ಮಾನ ಮಾಡಿದ್ದೆವು. ಆದರೆ, ಇದೀಗ ಉಪ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಇನ್ನು ಯಾವಾಗ ಸಂಪುಟ ವಿಸ್ತರಣೆ ಮಾಡಬೇಕೆಂಬ ಬಗ್ಗೆ ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಶನಿವಾರ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮ ಪ್ರನಿಧಿಗಳೊಂದಿಗೆ ಮಾತನಾಡಿದ ಅವರು, ಅ.8ಕ್ಕೆ ಕೆಪಿಸಿಸಿ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ರಾಜ್ಯಕ್ಕೆ ಆಗಮಿಸುವ ಬಗ್ಗೆ ನನಗೆ ಅಧಿಕೃತ ಮಾಹಿತಿ ಇಲ್ಲ. ಆದರೆ, ಉಪ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ನಾನೇ ಅವರೊಂದಿಗೆ ದೂರವಾಣಿಯಲ್ಲಿ ಚರ್ಚೆ ಮಾಡಿದ್ದೇನೆ ಎಂದು ಸ್ಪಷ್ಟಣೆ ನೀಡಿದರು.

ಸಚಿವ ಶಂಕರ್ ಕಾಂಗ್ರೆಸ್ ಸೇರ್ಪಡೆ ಸಂಬಂಧ ಮೊದಲು ಹಾವೇರಿ ಜಿಲ್ಲೆಯ ಸ್ಥಳೀಯ ಕಾಂಗ್ರೆಸ್ ಮುಖಂಡರೊಂದಿಗೆ ಸಮಾಲೋಚನೆ ನಡೆಸಬೇಕು. ಆ ಬಳಿಕ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಶಂಕರ್ ಅವರು ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲೆ ಇದ್ದವರು ಎಂದು ಹೇಳಿದರು.

ಸಚಿವ ಮಹೇಶ್ ಕಾಂಗ್ರೆಸ್ ವಿರುದ್ಧ ಆರೋಪ ಮಾಡಿರುವ ಬಗ್ಗೆ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಚರ್ಚಿಸಲಿದ್ದಾರೆ. ಇನ್ನೊಮ್ಮೆ ಅವರು ಆ ರೀತಿಯ ಹೇಳಿಕೆ ನೀಡಬಾರದು. ಅವರು ನಮ್ಮ ಪಕ್ಷದ ವಿರುದ್ಧ ಆರೋಪ ಮಾಡಿದ್ದು ಸರಿಯಲ್ಲ ಎಂದು ದಿನೇಶ್ ಗುಂಡೂರಾವ್ ಆಕ್ಷೇಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News