×
Ad

ಸ್ವಯಂ ಉದ್ಯೋಗ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

Update: 2018-10-06 20:31 IST

ಬೆಂಗಳೂರು, ಅ.6: ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಹಿಂದುಳಿದ ವರ್ಗಗಳ ನಿರುದ್ಯೋಗಿ ಪದವೀಧರರಿಗೆ ಸ್ವಯಂ ಉದ್ಯೋಗ ಸಾಲ ಸೌಲಭ್ಯವನ್ನು ವಾರ್ಷಿಕ ಶೇ.6 ರ ಬಡ್ಡಿದರದಲ್ಲಿ ಗರಿಷ್ಠ ರೂ. 10ಲಕ್ಷ ರೂ. ವರೆಗೆ ಸಾಲ ಒದಗಿಸಲಾಗಿದೆ.

ಈ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಬಯಸುವವರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿಗದಿತ ಅರ್ಜಿ ನಮೂನೆಗಳನ್ನು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯಲ್ಲಿ ಅಥವಾ ಆಯಾ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ವಿಸ್ತರಣಾಧಿಕಾರಿಗಳ ಕಚೇರಿಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಲು ಕೊನೆಯ ಅ.20ರೊಳಗೆ ಸಲ್ಲಿಸಬೇಕು. ಹೆಚ್ಚಿನ ವಿವರಗಳನ್ನು ನಿಗಮದ www.karnataka.gov.in/dbcdc ವೆಬ್‌ಸೈಟ್‌ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News