ಕ್ರೈಸ್ತ ಸನ್ಯಾಸಿನಿಯ ಅತ್ಯಾಚಾರ ಪ್ರಕರಣ: ಬಿಷಪ್ ಮುಳಕ್ಕಲ್ ನ್ಯಾಯಾಂಗ ಬಂಧನ 14 ದಿನ ವಿಸ್ತರಣೆ

Update: 2018-10-06 16:32 GMT

ಹೊಸದಿಲ್ಲಿ, ಅ. 6: ಕ್ರೈಸ್ತ ಸನ್ಯಾಸಿನಿಯ ಅತ್ಯಾಚಾರ ಪ್ರಕರಣದ ಆರೋಪಿಯಾಗಿರುವ ಬಿಷಪ್ ಫ್ರಾಂಕೊ ಮುಳಕ್ಕಲ್‌ಗೆ ಕೇರಳ ನ್ಯಾಯಾಲಯ ನೀಡಿದ್ದ ನ್ಯಾಯಾಂಗ ಬಂಧನವನ್ನು ಅಕ್ಟೋಬರ್ 20ರ ವರೆಗೆ ವಿಸ್ತರಿಸಲಾಗಿದೆ.

ನ್ಯಾಯಾಂಗ ಬಂಧನದ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಅವರನ್ನು ಇಂದು ಕೊಟ್ಟಾಯಂ ಜಿಲ್ಲೆಯ ಪಾಲಾ ನ್ಯಾಯಾಂಗ ದಂಡಾಧಿಕಾರಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಜಾಮೀನು ಕೋರಿ ನಾವು ಇನ್ನೊಮ್ಮೆ ಕೇರಳ ಉಚ್ಚ ನ್ಯಾಯಾಲಯ ಸಂಪರ್ಕಿಸಲಿದ್ದೇವೆ ಎಂದು ಬಿಷಪ್ ಪರ ವಕೀಲರು ತಿಳಿಸಿದ್ದಾರೆ.

ಉಚ್ಚ ನ್ಯಾಯಾಲಯ ಕಳೆದ ಬುಧವಾರ ಅವರಿಗೆ ಜಾಮೀನು ನಿರಾಕರಿಸಿತ್ತು. ಅತ್ಯಾಚಾರ ಆರೋಪದಲ್ಲಿ ಬಂಧಿತರಾಗಿರುವ ದೇಶದ ಮೊದಲ ಬಿಷಪ್ ಮುಳಕ್ಕಲ್. ಸೆಪ್ಟಂಬರ್‌ನಲ್ಲಿ ಅವರನ್ನು ಮೂರು ದಿನಗಳ ಕಾಲ ತೀವ್ರವಾಗಿ ವಿಚಾರಣೆ ನಡೆಸಲಾಗಿತ್ತು. ಆರೋಪಿಯನ್ನು ಬಂಧಿಸಿದ ಬಳಿಕ ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News