×
Ad

ಅ.10: ಸೀತಾರಾಮ ತೋಳ್ಪಡಿತ್ತಾಯವರಿಗೆ ‘ಕಲ್ಕೂರ ಸಾಧನಾ ಪ್ರಶಸ್ತಿ’

Update: 2018-10-06 22:08 IST

ಮಂಗಳೂರು, ಅ. 6: ಧರ್ಮಸ್ಥಳ ಶಾಂತಿವನ ಟ್ರಸ್ಟ್ ಕಾರ್ಯದರ್ಶಿ ಸೀತಾರಾಮ ತೋಳ್ಪಾಡಿತ್ತಾಯವರಿಗೆ ಜೀವಮಾನ ಸಾಧನೆ ಗುರುತಿಸಿ ಅ.10ರಂದು ಸಂಜೆ 5 ಗಂಟೆಗೆ ಪುರಭವನದಲ್ಲಿ ಆಯೋಜಿಸಲಾಗಿರುವ ಡಾ.ಶಿವರಾಮ ಕಾರಂತ ಹುಟ್ಟುಹಬ್ಬ ಸಮಾರಂಭದಲ್ಲಿ ‘ಕಲ್ಕೂರ ಸಾಧನಾ ಪ್ರಶಸ್ತಿ’ ನೀಡಿ ಗೌರವಿಸಲಾಗುವುದು.

ಕಾರಂತ ಹುಟ್ಟುಹಬ್ಬ ಆಚರಣೆಯ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ದ.ಕ. ಜಿಲ್ಲಾ ಕಸಾಪ ಅಧ್ಯಕ್ಷ ಎಸ್.ಪ್ರದೀಪಕುಮಾರ ಕಲ್ಕೂರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News