ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Update: 2018-10-06 16:38 GMT

ಬೆಂಗಳೂರು, ಅ.6: ಮಾನವ ಸಂಪನ್ಮೂಲ ಅಭಿವೃದ್ಧಿ ಮಂತ್ರಾಲಯ ಕೇಂದ್ರ ಸರಕಾರದ ವತಿಯಿಂದ ಕಾಲೇಜು ಮತ್ತು ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳಿಗಾಗಿ ನೀಡುವ ರಾಷ್ಟ್ರಮಟ್ಟದ ವಿದ್ಯಾರ್ಥಿ ವೇತನಕ್ಕೆ 2014ನೆ ಸಾಲಿನಲ್ಲಿ ಆಯ್ಕೆಯಾಗಿರುವ ವಿದ್ಯಾರ್ಥಿಗಳಿಗೆ 4ನೆ ನವೀಕರಣ ಪ್ರಕ್ರಿಯೆಯನ್ನು ಕೈಗೊಳ್ಳಲಾಗುತ್ತಿದೆ.

ಇದಕ್ಕಾಗಿ ಸಂಬಂಧಪಟ್ಟ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ನಮೂನೆಗಳನ್ನು ಇಲಾಖಾ ವೆಬ್‌ಸೈಟ್ http://pue.kar.nic.in>Scholarship>mhrd Scholarship > MHRD Scholarship2014-IV renewal ನಲ್ಲಿ ಅಳವಡಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಈ ವೆಬ್‌ಸೈಟನ್ನು ಸಂಪರ್ಕಿಸಿ ತಮಗೆ ಸಂಬಂಧಪಟ್ಟ ಮಾಹಿತಿಯನ್ನು (ಕಡ್ಡಾಯವಾಗಿ ವಿದ್ಯಾರ್ಥಿ ಸಂಖ್ಯೆಯೊಂದಿಗೆ) ನಿಗದಿತ ನಮೂನೆಯಲ್ಲಿ ಅ.25 ರೊಳಗೆ ಪ್ರಾಂಶುಪಾಲರಿಗೆ ನೀಡಲು ಪ್ರಕಟನೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News