×
Ad

ಕರ್ತವ್ಯನಿರತ ಪೊಲೀಸ್ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ 5 ವರ್ಷಗಳ ಶಿಕ್ಷೆ

Update: 2018-10-06 22:12 IST

ಪುತ್ತೂರು, ಅ. 6: ಕರ್ತವ್ಯನಿರತ ಪೊಲೀಸ್‍ಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಧಿಸಿ ಆರೋಪ ಎದುರಿಸುತ್ತಿದ್ದ ವ್ಯಕ್ತಿಯನ್ನು ಅಪರಾಧಿ ಎಂದು ಪರಿಗಣಿಸಿ ಆತನಿಗೆ 5 ವರ್ಷಗಳ ಕಠಿಣ ಸಜೆಯನ್ನು ವಿಧಿಸಿ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಆದೇಶ ನೀಡಿದೆ.

ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ಕಜೆ ನಿವಾಸಿ ಉಮ್ಮರ್ ಫಾರೂಕ್ ಶಿಕ್ಷೆಗೆ ಒಳಗಾದ ಅಪರಾಧಿ.

ಈತ ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ಗ್ರಾಮದ ಜಿಡೆಕಲ್ಲು ಎಂಬಲ್ಲಿರುವ ತನ್ನ ಪತ್ನಿಯ ಮನೆಗೆ ಆಗಮಿಸಿ ಆಕೆಗೆ ಹಲ್ಲೆ ನಡೆಸುತ್ತಿರುವ ದೂರಿನ ಹಿನ್ನಲೆಯಲ್ಲಿ ಮನೆಗೆ ಭೇಟಿ ನೀಡದ ಪೊಲೀಸರಿಗೆ ಹಲ್ಲೆ ನಡೆಸಿರುವ ಬಗ್ಗೆ  ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 

ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಅಂತಿಮ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ 5ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ನ್ಯಾಯಮೂರ್ತಿ ಶಿವಣ್ಣ ಅವರು, ಅ. 6ರಂದು ತೀರ್ಪು ನೀಡಿದ್ದಾರೆ. ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಕ್ಕೆ 5 ವರ್ಷ ಕಠಿಣ ಸಜೆ, 10 ಸಾವಿರ ರೂ. ದಂಡ ವಿಧಿಸಲಾಗಿದೆ. ದಂಡ ವಿಧಿಸಲು ತಪ್ಪಿದರೆ 1 ವರ್ಷ ಸಾದಾ ಶಿಕ್ಷೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಕ್ಕೆ 1 ವರ್ಷ ಜೈಲು ಶಿಕ್ಷೆ, 2 ಸಾವಿರ ರೂ. ದಂಡ. ತಪ್ಪಿದರೆ 3 ತಿಂಗಳು ಜೈಲು ಶಿಕ್ಷೆ ವಿಧಿಸಿ ತೀರ್ಪಿತ್ತಿದೆ. ಸರಕಾರಿ ಅಭಿಯೋಜಕ ಉದಯ್ ಕುಮಾರ್ ವಾದಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News