×
Ad

ಕನ್ನಡ ರಾಜ್ಯೋತ್ಸವ: ಕನ್ನಡ ಭಾಷಾ ಕವನಗಳ ಆಹ್ವಾನ

Update: 2018-10-06 22:35 IST

ಮಂಗಳೂರು, ಅ. 6:  ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಸಮಾರಂಭದ ಪ್ರಯುಕ್ತ ದ.ಕ. ಜಿಲ್ಲಾ ಕಸಾಪದಿಂದ ನಗರದ ಪುರಭವನದಲ್ಲಿ ಕನ್ನಡ ಭಾಷಾ ಕವಿಗೋಷ್ಠಿಯನ್ನು ಆಯೋಜಿಸಿದ್ದು, ಸ್ವರಚಿತ ಕವನಗಳನ್ನು ಆಹ್ವಾನಿಸಲಾಗಿದೆ.

ಜಿಲ್ಲೆಯ ಪ್ರತಿಭಾನ್ವಿತ ಕವಿಗಳು ತಾವೇ ರಚಿಸಿದ ಕವನಗಳನ್ನು ಅ.26ರೊಳಗೆ ಜಿಲ್ಲಾ ಕಸಾಪ ಅಧ್ಯಕ್ಷರು, ಕಲ್ಕೂರ ಪ್ರತಿಷ್ಠಾನ, ಶ್ರೀಕೃಷ್ಣ ಕಾಂಪ್ಲೆಕ್ಸ್, ಮಹಾತ್ಮ ಗಾಂಧಿ ರಸ್ತೆ, ಕೊಡಿಯಾಲ್‌ಬೈಲ್, ಮಂಗಳೂರು ಈ ವಿಳಾಸಕ್ಕೆ ತಲುಪುವಂತೆ ಕಳುಹಿಸಿಕೊಡಲು ಕೋರಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಎಸ್.ಪ್ರದೀಪಕುಮಾರ ಕಲ್ಕೂರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News