ಸಂಪುಟ ವಿಸ್ತರಣೆ ಮುಂದೂಡಿಕೆಗೆ ಕಾಂಗ್ರೆಸ್ ಶಾಸಕ ಬಿ.ಸಿ. ಪಾಟೀಲ್ ಆಕ್ರೋಶ

Update: 2018-10-07 12:07 GMT

ಬೆಂಗಳೂರು, ಅ. 7: ಲೋಕಸಭೆ ಮತ್ತು ವಿಧಾನಸಭಾ ಉಪ ಚುನಾವಣೆ ನೆಪದಲ್ಲಿ ಸಚಿವ ಸಂಪುಟ ವಿಸ್ತರಣೆ ಮುಂದೂಡಿಕೆಗೆ ಕಾಂಗ್ರೆಸ್ ಶಾಸಕ ಬಿ.ಸಿ.ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದ್ದು, ಪದೇ-ಪದೇ ಸಂಪುಟ ವಿಸ್ತರಣೆಗೆ ನೆಪ ಹುಡುಕುತ್ತಿದೆ. ಕಾಂಗ್ರೆಸ್ ಪ್ರಜಾಪ್ರಭುತ್ವವನ್ನು ಕೊಲ್ಲುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರವಿವಾರ ಬೆಳಗ್ಗೆ ಟ್ವಿಟ್ ಮಾಡಿರುವ ಬಿ.ಸಿ.ಪಾಟೀಲ್, ಸಚಿವ ಸಂಪುಟ ವಿಸ್ತರಣೆ ಮುಂದೂಡಿಕೆ ಮಾಡಿದ ಕಾಂಗ್ರೆಸ್ ನಾಯಕರು ಸರ್ವಾಧಿಕಾರಿಗಳು ಎಂದು ಜರಿದಿದ್ದಾರೆ. ಅಲ್ಲದೆ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಾ.ಜಿ.ಪರಮೇಶ್ವರ್ ಹೆಸರಿಗೆ ನೇರವಾಗಿ ಟ್ವಿಟ್ ಮಾಡಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ವಿಳಂಬ ಮಾಡುವ ಮೂಲಕ ಕಾಂಗ್ರೆಸ್ ತನ್ನ ಪಕ್ಷದ ಶಾಸಕರನ್ನು ಅವಮಾನ ಮಾಡುತ್ತಿದೆ. ಇದು ಪ್ರಜಾಪ್ರಭುತ್ವವನ್ನು ಕೊಲ್ಲಲಾಗುತ್ತದೆ. ಇದು ಪಕ್ಷದಲ್ಲಿನ ಸರ್ವಾಧಿಕಾರಿ ಧೋರಣೆಯನ್ನು ತೋರಿಸುತ್ತಿದ್ದಾರೆ ಎಂದು ಶಾಸಕ ಬಿ.ಸಿ.ಪಾಟೀಲ್ ಪಕ್ಷದ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News