ಐದು ತಿಂಗಳಿಗೆ ಲೋಕಸಭಾ ಉಪ ಚುನಾವಣೆ ಬೇಕೆ ? : ಯಡಿಯೂರಪ್ಪ ಪ್ರಶ್ನೆ

Update: 2018-10-07 07:10 GMT

ಬೆಂಗಳೂರು, ಅ.7: ರಾಜ್ಯದಲ್ಲಿ ತೆರವಾಗಿರುವ  ಮೂರು ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ಪ್ರಕಟಗೊಂಡ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ವಿಪಕ್ಷ  ನಾಯಕ ಬಿ.ಎಸ್ ಯಡಿಯೂರಪ್ಪ ಅವರು ಕೇವಲ 5 ತಿಂಗಳಿಗೆ ಲೋಕಸಭಾ ಉಪಚುನಾವಣೆ ಬೇಕೆ ? ಎಂದು ಚುನಾವಣಾ ಆಯೋಗದ ನಿಲುವನ್ನು ಪ್ರಶ್ನಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದ ಮೂರು ಪ್ರಮುಖ ಪಕ್ಷಗಳಿಗೂ ಈ ಚುನಾವಣೆ ಬೇಕಾಗಿಲ್ಲ. ನನಗೆ ಉಪ ಚುನಾವಣೆ ಇದೆ ಎನ್ನುವ ವಿಚಾರ ಮರೆತು ಹೋಗಿತ್ತು. ನ.3ರಂದು ನಡೆಯಲಿರುವ ಉಪಚುನಾವಣೆಯಲ್ಲಿ ಆಯ್ಕೆಯಾದ ಸಂಸದರು ಕೇವಲ ಐದು ತಿಂಗಳು ಅಧಿಕಾರದಲ್ಲಿರುತ್ತಾರೆ. ಮತ್ತೆ ಲೋಕಸಭೆಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಇದೀಗ ಯಾಕೆ ಈ ಚುನಾವಣೆ ಎಂದು ಅವರು ಪ್ರಶ್ನಿಸಿದ್ದಾರೆ.

ಶಿವಮೊಗ್ಗ ಕ್ಷೇತ್ರಕ್ಕೆ ತಮ್ಮ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ  ಬಿಜೆಪಿ ಇನ್ನೂ ಅಭ್ಯರ್ಥಿಯ ಆಯ್ಕೆ ಮಾಡಿಲ್ಲ. ಪಕ್ಷದ ಸಭೆಯಲ್ಲಿ ಚರ್ಚಿಸಿ ಈ ಸಂಬಂಧ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News