×
Ad

ಉಡುಪಿ: ವಿಕಲಚೇತನರ ಸಬಲೀಕರಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆಗೆ ರಾಜ್ಯ ಪ್ರಶಸ್ತಿ

Update: 2018-10-07 19:51 IST

ಉಡುಪಿ, ಅ. 7: ಬೆಂಗಳೂರಿನಲ್ಲಿ ಡಿ.3ರಂದು ನಡೆಯುವ ರಾಜ್ಯಮಟ್ಟದ ವಿಶ್ವ ವಿಕಲಚೇತನರ ದಿನಾಚರಣೆಯ ಸಂದರ್ಭದಲ್ಲಿ ವಿಕಲಚೇತನರ ಸಬಲೀ ಕರಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿ ಮತ್ತು ಸಂಸ್ಥೆಗಳಿಗೆ ಹಾಗೂ 15 ವರ್ಷಕ್ಕಿಂತ ಹೆಚ್ಚಿನ ಸೇವೆ ಸಲ್ಲಿಸಿರುವ/ಸಲ್ಲಿಸುತ್ತಿರುವ ವಿಶೇಷ ಶಿಕ್ಷಕರಿಗೂ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಉದ್ದೇಶಿಸಿದೆ.

ಆಸಕ್ತರು ನಿಗದಿತ ಅರ್ಜಿ ನಮೂನೆಗಳನ್ನು ಉಡುಪಿ ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳ ಕಛೇರಿ, ಸಿ ಬ್ಲಾಕ್, ತಳಮಹಡಿ, ಜಿಪಂ ವಿಬಾಗ, ಜಿಲ್ಲಾಧಿಕಾರಿ ಕಛೇರಿ, ರಜತಾದ್ರಿ, ಮಣಿಪಾಲ, (ದೂರವಾಣಿ: 0820-2574810/811) ಇಲ್ಲಿಂದ ಅಥವಾ ಇಲಾಖೆಯ ವೆಬ್‌ಸೈಟ್ www.welfareofdisabled.kar.nic.in ಅಥವಾ www.dwdsc.kar.nic.in ನಿಂದ ಪಡೆದುಕೊಳ್ಳಬಹುದಾಗಿದೆ. ಸಂಪೂರ್ಣವಾಗಿ ಭರ್ತಿ ಮಾಡಿದ ಅರ್ಜಿಗಳನ್ನು ಅ.25ರೊಳಗಾಗಿ ಸಲ್ಲಿಸು ವಂತೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News