×
Ad

​ಕೈದಿ ಪರಾರಿ: ಪತ್ತೆಗೆ ಮೂರು ತಂಡ ರಚನೆ

Update: 2018-10-07 22:20 IST

ಬೈಂದೂರು, ಅ.7: ಬೈಂದೂರು ರೈಲು ನಿಲ್ದಾಣದಲ್ಲಿ ಅ.6ರಂದು ಪೊಲೀಸ ರಿಂದ ತಪ್ಪಿಸಿಕೊಂಡು ಪರಾರಿಯಾದ ಪೊಕ್ಸೋ ಪ್ರಕರಣದ ವಿಚಾರಣಾಧೀನ ಕೈದಿ ಅರೆಶಿರೂರು ನಿವಾಸಿ ಸುರೇಶ ಮರಾಠಿ (26) ಎಂಬಾತನ ಶೋಧ ಕಾರ್ಯವನ್ನು ಪೊಲೀಸರು ಮುಂದುವರೆಸಿದ್ದಾರೆ.

ಪರಾರಿಯಾದ ಕೈದಿಯ ಪತ್ತೆಗಾಗಿ ಪೊಲೀಸರು ಮೂರು ತಂಡಗಳನ್ನು ರಚಿಸಿದ್ದು, ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಆದರೆ ಈವರೆಗೆ ಕೈದಿಯ ಸುಳಿವು ಇಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಉಡುಪಿ ಜಿಲ್ಲಾ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿ ಮರಳಿ ಕಾರ ವಾರ ಜೈಲಿಗೆ ರೈಲಿನಲ್ಲಿ ಕರೆದು ಕೊಂಡು ಹೋಗುತ್ತಿದ್ದ ವೇಳೆ ವಿಚಾರಣಾಧೀನ ಕೈದಿ ಸುರೇಶ್ ಮರಾಠಿ ಪರಾರಿಯಾಗಿದ್ದು, ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News