ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಅ.10ಕ್ಕೆ ಕೋರ್ ಕಮಿಟಿ ಸಭೆ: ಬಿಎಸ್‌ವೈ

Update: 2018-10-08 12:32 GMT

ಬೆಂಗಳೂರು, ಅ. 8: ಮೂರು ಲೋಕಸಭೆ ಮತ್ತು ಎರಡು ವಿಧಾನಸಭೆ ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಗೆ ಅ.10ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ ಕರೆಯಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಸೋಮವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ, ಬಳ್ಳಾರಿ, ಮಂಡ್ಯ ಲೋಕಸಭೆ ಮತ್ತು ಜಮಖಂಡಿ ಹಾಗೂ ರಾಮನಗರ ವಿಧಾನಸಭಾ ಉಪ ಚುನಾವಣೆಗೆ ಆಕಾಂಕ್ಷಿಗಳು ಈಗಾಗಲೇ ಅರ್ಜಿ ಸಲ್ಲಿಸಿದ್ದು, ಕೋರ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದರು.

ಮೋದಿ ಸ್ಪರ್ಧೆ ಇಲ್ಲ: 2019ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ಕರ್ನಾಟಕ ರಾಜ್ಯದಿಂದ ಸ್ಪರ್ಧಿಸಲಿದ್ದಾರೆಂಬುದು ಕೇವಲ ಊಹಾಪೋಹ ಅಷ್ಟೇ. ಈ ಸುದ್ದಿಯಲ್ಲಿ ಯಾವುದೇ ಹುರುಳಿಲ್ಲ ಎಂದು ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ಸ್ಪಷ್ಟಣೆ ನೀಡಿದರು.

  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News