ಎಸ್ಸಿ-ಎಸ್ಟಿ ವಿದ್ಯಾರ್ಥಿಗಳ ಶೈಕ್ಷಣಿಕ ಸಾಲಮನ್ನಾಕ್ಕೆ ರಾಜ್ಯ ಸರಕಾರ ಸಿದ್ಧತೆ
Update: 2018-10-08 18:22 IST
ಬೆಂಗಳೂರು, ಅ. 8: ರೈತರ ಕೃಷಿ ಸಾಲಮನ್ನಾದ ಬೆನ್ನಲ್ಲೆ ರಾಜ್ಯ ಸರಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ(ಎಸ್ಸಿ-ಎಸ್ಟಿ) ವಿದ್ಯಾರ್ಥಿಗಳ ಶೈಕ್ಷಣಿಕ ಸಾಲಮನ್ನಾಕ್ಕೆ ಚಿಂತನೆ ನಡೆಸಿದೆ.
ಪ್ರಜಾ ಪರಿವರ್ತನಾ ವೇದಿಕೆ ರಾಜ್ಯಾಧ್ಯಕ್ಷರು ಸಲ್ಲಿಸಿದ ಮನವಿ ಹಿನ್ನೆಲೆಯಲ್ಲಿ ಎಸ್ಸಿ- ಎಸ್ಟಿ ವಿದ್ಯಾರ್ಥಿಗಳು ವಿವಿಧ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಪಡೆದಿರುವ ಶೈಕ್ಷಣಿಕ ಸಾಲ ಮನ್ನಾ ಸಂಬಂಧ ಮಾಹಿತಿ ನೀಡುವಂತೆ ಎಲ್ಲ ಜಿಲ್ಲಾ ಜಂಟಿ ನಿರ್ದೇಶಕರಿಗೆ ಸಮಾಜ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಎಸ್ಸಿ-ಎಸ್ಟಿ ವಿದ್ಯಾರ್ಥಿಗಳು, ಅವರ ಕೋರ್ಸಿನ ವಿವರ, ಬ್ಯಾಂಕ್ ಮತ್ತು ಅವರು ಪಡೆದಿರುವ ಸಾಲ ಮತ್ತು ಬಡ್ಡಿಯ ಮೊತ್ತ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಅತ್ಯಂತ ಜರೂರಾಗಿ ಸಲ್ಲಿಸಬೇಕು ಎಂದು ನಿರ್ದೇಶನ ನೀಡಲಾಗಿದೆ.