ಸಕಲೇಶಪುರ: ಕಾರು-ಎರಡು ಬೈಕ್‍ಗಳ ನಡುವೆ ಅಪಘಾತ; ಮಹಿಳೆಗೆ ತೀವ್ರ ಗಾಯ
Update: 2018-10-08 18:33 IST
ಸಕಲೇಶಪುರ,ಅ.8: ಕಾರು ಹಾಗೂ ಎರಡು ಬೈಕ್‍ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೊಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ತಾಲೂಕಿನ ಬಾಳ್ಳುಪೇಟೆ ಸಮೀಪ ಚಿಕ್ಕನಾಯಕನಹಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ.
ಘಟನೆಯಲ್ಲಿ ಬೆಂಗಳೂರು ಮೂಲದ ಇಂದ್ರಾಣಿ (45) ಅವರಿಗೆ ತಲೆಗೆ ತೀವ್ರ ಪೆಟ್ಟು ಬಿದ್ದು ರಕ್ತಸ್ರಾವವಾಗಿದ್ದು, ನಿಮಾನ್ಸ್ ಅಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರಿನಲ್ಲಿದ್ದ ಉಳಿದ ಇಬ್ಬರಿಗೆ ಸಣ್ಣ ಪುಟ್ಟ ಗಾಯವಾಗಿದೆ. ಬೈಕಿನಲ್ಲಿದ್ದ ಬಾಳ್ಳುಪೇಟೆಯ ಸಂಜೀವ ಮತ್ತು ಸಕಲೆಶಪುರದ ಅಗ್ರಹಾರ ಮೂಲದ ಶಂಕರ ಎಂಬವರಿಗೂ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಸುಬ್ರಮಣ್ಯ ದೇವರ ದರ್ಶನ ಮುಗಿಸಿ ಬೆಂಗಳೂರಿಗೆ ವಾಪಸ್ಸು ಹೋಗುವಾಗ ಕಾರಿನ ಚಾಲಕನ ಅತಿ ವೇಗ ಮತ್ತು ಅಜಾಗರೂಕತೆಯಿಂದ ಅಪಘಾತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಈ ಸಂಬಂಧ ಸಕಲೇಶಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.