×
Ad

‘ಪಿಜಿಸಿಇಟಿ’ ಅಂತಿಮ ಸುತ್ತಿನ ಸೀಟು ಹಂಚಿಕೆ ಫಲಿತಾಂಶ

Update: 2018-10-08 19:13 IST

ಬೆಂಗಳೂರು, ಅ.8: ಎಂಬಿಎ, ಎಂಸಿಎ ಮತ್ತು ಎಂ.ಇ/ಎಂ.ಟೆಕ್ ಕೋರ್ಸುಗಳ ಪ್ರವೇಶಕ್ಕಾಗಿ ಪಿಜಿಸಿಇಟಿ-2018ರ ಎರಡನೆ ಹಾಗೂ ಅಂತಿಮ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ.

ಆಯುಷ್-2018: ಆಯುರ್ವೇದ, ಯೋಗ ಮತ್ತು ನಾಚುರೋಪತಿ, ಯುನಾನಿ ಹಾಗೂ ಹೋಮಿಯೊಪತಿ ಕೋರ್ಸುಗಳ ಪ್ರವೇಶಕ್ಕಾಗಿ ಸಿಇಟಿ-2018ರ ಎರಡನೆ ಹಾಗೂ ಅಂತಿಮ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ.

ಕಿದ್ವಾಯಿ ನೇಮಕಾತಿ: ಬೆಂಗಳೂರಿನ ಕಿದ್ವಾಯಿ ಸಂಸ್ಥೆಯಲ್ಲಿನ ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹುದ್ದೆಗಳ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದ ಅಂಕಗಳ ವಿವರಗಳನ್ನು ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News