ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಮೃತ್ಯು

Update: 2018-10-08 15:33 GMT

ಬೆಂಗಳೂರು, ಅ.8: ಹಿಂದಿನಿಂದ ವೇಗವಾಗಿ ಬಂದ ಕಾರೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ದುರ್ಘಟನೆ ಇಲ್ಲಿನ ಆಡುಗೋಡಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಗರದ ಆಡುಗೋಡಿಯ ಸೇಂಟ್ ಜಾನ್ ಆಸ್ಪತ್ರೆ ಬಳಿ ಈ ಘಟನೆ ನಡೆದಿದ್ದು, ಚಾಮರಾಜಪೇಟೆ ಪ್ರವೀಣ್ ಕುಮಾರ್ (19) ಮೃತಪಟ್ಟ ವಿದ್ಯಾರ್ಥಿ ಎಂದು ಪೊಲೀಸರು ತಿಳಿಸಿದ್ದಾರೆ.

ದ್ವಿತೀಯ ಪಿಯುಸಿ ಓದುತ್ತಿದ್ದ ಪ್ರವೀಣ್ ಬೆಳ್ಳಂದೂರಿನ ಖಾಸಗಿ ಕಂಪೆನಿಯೊಂದರಲ್ಲಿ ಅರೆಕಾಲಿಕ ಉದ್ಯೋಗ ಮಾಡುತ್ತಿದ್ದ. ಕೆಲಸ ಮುಗಿಸಿಕೊಂಡು ರವಿವಾರ ರಾತ್ರಿ 9:40ರ ವೇಳೆ ಸೇಂಟ್ ಜಾನ್ ಆಸ್ಪತ್ರೆಯ ಐಶ್ವರ್ಯ ಜಂಕ್ಷನ್ ಬಳಿ ಬೈಕ್‌ನಲ್ಲಿ ಮನೆಗೆ ಬರುತ್ತಿದ್ದಾಗ ಹಿಂದಿನಿಂದ ಬಂದ ಕಾರು ಢಿಕ್ಕಿ ಹೊಡೆದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಆಡುಗೋಡಿ ಸಂಚಾರ ಪೊಲೀಸರು ಕಾರು ಚಾಲಕನನ್ನು ಬಂಧಿಸಿ, ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News