×
Ad

ಉಡುಪಿ: ಕೈದಿ ಪರಾರಿ ಪ್ರಕರಣ; ಪೊಲೀಸ್ ಸಿಬ್ಬಂದಿಗಳಿಬ್ಬರ ಅಮಾನತು

Update: 2018-10-08 22:16 IST

ಉಡುಪಿ, ಅ.8: ವಿಚಾರಣಾಧೀನ ಕೈದಿ ಪರಾರಿ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯ ಲೋಪ ಎಸಗಿರುವ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ್ ಬಿ.ನಿಂಬರ್ಗಿ ಇಂದು ಅಮಾನತು ಗೊಳಿಸಿದ್ದಾರೆ.

ಬೈಂದೂರು ಪೊಲೀಸ್ ಠಾಣೆಯ ಉದಯ ಕುಮಾರ್ ಹಾಗೂ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಗೋಪಾಲ ಎಚ್. ಅಮಾನತುಗೊಂಡ ಸಿಬ್ಬಂದಿಗಳು.

ಬೈಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪೊಕ್ಸೋ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಜಿಲ್ಲಾ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿ ಮರಳಿ ಕಾರವಾರ ಜೈಲಿಗೆ ರೈಲಿನಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ ವಿಚಾರಣಾಧೀನ ಕೈದಿ ಸುರೇಶ್ ಮರಾಠಿ (26) ಎಂಬಾತ ಬೈಂದೂರು ರೈಲ್ವೆ ನಿಲ್ದಾಣದಲ್ಲಿ ಅ.6ರಂದು ಪೊಲೀಸರ ಕೈಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದನು.

‘ಇಬ್ಬರು ಪೊಲೀಸ್ ಸಿಬ್ಬಂದಿಗಳು ಕೈದಿ ಪರಾರಿ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿರುವುದು ಕಂಡುಬಂದಿದ್ದು, ಆ ಹಿನ್ನೆಲೆಯಲ್ಲಿ ಅವರನ್ನು ಅಮಾ ನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಪರಾರಿಯಾಗಿರುವ ಕೈದಿಗಾಗಿ ಶೋಧ ಕಾರ್ಯವನ್ನು ಮುಂದುವರಿಸಲಾಗಿದೆ. ಈವರೆಗೆ ಯಾವುದೇ ಸುಳಿವು ಸಿಕ್ಕಿಲ್ಲ’ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ್ ಬಿ.ನಿಂಬರ್ಗಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News