×
Ad

ಗ್ರಾಮೀಣ ಪ್ರದೇಶದಲ್ಲಿ ಜೆಡಿಎಸ್ ಬಲಪಡಿಸಿ: ರಂಗಣ್ಣ

Update: 2018-10-08 22:44 IST

ಹೆಬ್ರಿ, ಅ.8: ಗ್ರಾಮೀಣ ಪ್ರದೇಶದಲ್ಲಿ ಜೆಡಿಎಸ್ ಪಕ್ಷವನ್ನು ಹಂತಹಂತವಾಗಿ ಬಲಪಡಿಸಬೇಕು, ಜೊತೆಗೆ ನಮ್ಮ ಮುಖ್ಯಮಂತ್ರಿಯವರ ಹಲವಾರು ಜನಪರ ಯೋಜನೆಯನ್ನು ಜನತೆಗೆ ತಲುಪಿಸುವ ಕೆಲಸವನ್ನು ಮಾಡಬೇಕು. ಕೃಷಿಕರ ಸಮಸ್ಯೆಗೆ ಸ್ಪಂದಿಸುವ ಕಾರ್ಯವಾಗಬೇಕು ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ರಂಗಣ್ಣ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಹೆಬ್ರಿಯ ಸೀತಾರಾಮ ಸಭಾಭವನದಲ್ಲಿ ಸೋಮವಾರ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸಭೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಜಯಕುಮಾರ್ ಪರ್ಕಳ, ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ ಶೆಟ್ಟಿ, ವಾಸುದೇವ ರಾವ್, ಕಾರ್ಕಳ ತಾಲೂಕು ಕಾರ್ಯಾಧ್ಯಕ್ಷ ಶ್ರೀಕಾಂತ ಪೂಜಾರಿ ಹೆಬ್ರಿ, ಮುಖಂಡ ಸೀತಾನದಿ ವಿಜೇಂದ್ರ ಶೆಟ್ಟಿ, ಶಿವಪ್ರಸಾದ್, ಪ್ರಮುಖರಾದ ಇಕ್ಬಾಲ್, ಸಚಿನ್, ರಝಕ್, ದೀಪಕ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News