ಅಗ್ರಸ್ಥಾನ ಕಾಯ್ದುಕೊಂಡ ಕೊಹ್ಲಿ, ಬುಮ್ರಾ

Update: 2018-10-08 18:24 GMT

ದುಬೈ, ಅ.8: ಭಾರತದ ನಾಯಕ ವಿರಾಟ್ ಕೊಹ್ಲಿ ಹಾಗೂ ವೇಗದ ಬೌಲರ್ ಜಸ್‌ಪ್ರಿತ್ ಬುಮ್ರಾ ಸೋಮವಾರ ಬಿಡುಗಡೆಯಾದ ಐಸಿಸಿ ಏಕದಿನ ರ‍್ಯಾಂಕಿಂಗ್‌ನಲ್ಲಿ ನಂ.1 ಸ್ಥಾನ ಕಾಯ್ದುಕೊಂಡಿದ್ದಾರೆ.

ಕೊಹ್ಲಿ 884 ಅಂಕ ಗಳಿಸಿ ದಾಂಡಿಗರ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನ ಉಳಿಸಿಕೊಂಡರೆ, ರೋಹಿತ್ ಶರ್ಮಾ 842 ರ‍್ಯಾಂಕಿಂಗ್‌ ಪಾಯಿಂಟ್ಸ್‌ನೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.

ಶಿಖರ್ ಧವನ್ ಅಗ್ರ-10ರಲ್ಲಿರುವ ಭಾರತದ ಇನ್ನೋರ್ವ ದಾಂಡಿಗ. ಧವನ್ 802 ಅಂಕ ಗಳಿಸಿ ಐದನೇ ಸ್ಥಾನದಲ್ಲಿದ್ದಾರೆ.

ಬೌಲರ್‌ಗಳ ಪೈಕಿ ‘ಡೆತ್ ಓವರ್‌ಗಳ ಸ್ಪೆಷಲಿಸ್ಟ್ ’ ಬುಮ್ರಾ 797 ಅಂಕ ಗಳಿಸಿ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ. ಎಡಗೈ ಸ್ಪಿನ್ನರ್ ಕುಲ್‌ದೀಪ್ ಯಾದವ್ 700 ಅಂಕ ಗಳಿಸಿ 3ನೇ ಸ್ಥಾನದಲ್ಲಿದ್ದಾರೆ.

ಅಫ್ಘಾನಿಸ್ತಾನದ ಸ್ಟಾರ್ ರಶೀದ್ ಖಾನ್(788 ಅಂಕ)ಎರಡನೇ ಸ್ಥಾನದಲ್ಲಿದ್ದಾರೆ. ಲೆಗ್ ಸ್ಪಿನ್ನರ್ ಯಜುವೇಂದ್ರ ಚಾಹಲ್(11ನೇ ಸ್ಥಾನ)ಅಗ್ರ-10ರೊಳಗೆ ಪ್ರವೇಶಿಸಲು ಯತ್ನಿಸುತ್ತಿದ್ದಾರೆ.

ಟೀಮ್ ರ‍್ಯಾಂಕಿಂಗ್‌ನಲ್ಲಿ ಭಾರತ 122 ಅಂಕದೊಂದಿಗೆ 2ನೇ ಸ್ಥಾನದಲ್ಲಿದೆ. ಇಂಗ್ಲೆಂಡ್(127) ಮೊದಲ ಸ್ಥಾನದಲ್ಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News