ಬಾಗೇಪಲ್ಲಿ: ಎಪಿಎಂಸಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ತೆಕ್ಕೆಗೆ

Update: 2018-10-09 11:43 GMT

ಬಾಗೇಪಲ್ಲಿ,ಅ.9: ಎಪಿಎಂಸಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತರಾದ ಪಿ.ರಾಮಚಂದ್ರರೆಡ್ಡಿ ಹಾಗೂ ಉಪಾಧ್ಯಕ್ಷರಾಗಿ ಟಿ.ನರಸಿಂಹಪ್ಪ ಅವರು ಜಯಗಳಿಸಿದ್ದಾರೆ.

ಎಪಿಎಂಸಿ ಕಚೇರಿಯಲ್ಲಿ ಮಂಗಳವಾರ ನಡೆದ ಚುನಾವಣೆಯಲ್ಲಿ ಪಿ.ರಾಮಚಂದ್ರರೆಡ್ಡಿ ಅವರು 9 ಮತಗಳನ್ನು ಪಡೆದರೆ, ಪರಾಜಿತ ಸಿಪಿಎಂ ಬೆಂಬಲಿತ ಅಭ್ಯರ್ಥಿ ಸೋಮಶೇಖರ್ 7 ಮತಗಳನ್ನು ಪಡೆದರು. ಉಪಾಧ್ಯಕ್ಷರಾಗಿ ಟಿ.ನರಸಿಂಹಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಒಟ್ಟು 16 ಸ್ಥಾನಗಳಲ್ಲಿ ಕಾಂಗ್ರೆಸ್ 10 ಸ್ಥಾನ, ಸಿಪಿಎಂ 4ಸ್ಥಾನ, ಜೆಡಿಎಸ್ ಮತ್ತು ಬಿಜೆಪಿ ತಲಾ ಒಂದು ಸ್ಥಾನಗಳನ್ನು ಹೊಂದಿರುವ ಎಪಿಎಂಸಿಯಲ್ಲಿ ಒಬ್ಬ ನಿರ್ದೇಶಕ  ಮಾತ್ರ ಕಾಂಗ್ರೆಸ್‍ಗೆ ಕೈಕೊಟ್ಟಿದ್ದಾರೆ ಎನ್ನಲಾಗಿದೆ.

ತಹಶೀಲ್ದಾರ್ ಮಹಮದ್ ಅಸ್ಲಂ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ನಿವೃತ್ತ ಗ್ರೇಡ್2 ತಹಸೀಲ್ದಾರ್ ಎಸ್.ಮುನಿರಾಮಯ್ಯ, ಎಪಿಎಂಸಿ ಕಾರ್ಯದರ್ಶಿ ಉಮಾ ಹಾಜರಿದ್ದರು. ಸಿಪಿಐ ನಯಾಜ್ ಬೇಗ್ ಮಾರ್ಗದರ್ಶನದಲ್ಲಿ ಪಿಎಸ್‍ಐ ಪಿ.ಎಂ.ನವೀನ್ ನೇತೃತ್ವದಲ್ಲಿ ಬೀಗಿ ಪೊಲೀಸ್ ಬಂದೋ ಬಸ್ತ್ ಏರ್ಪಡಿಸಲಾಗಿತ್ತು.

ಈ ಸಂದರ್ಭದಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಶುಭಾಶಯ ಕೋರಿ ಮಾತನಾಡಿ, ಮಾರುಕಟ್ಟೆಯಲ್ಲಿ ಮುಂದಿನ ದಿನಗಳಲ್ಲಿ ರೈತರಿಗೆ ಸಹಾಯವಾಗುವಂತೆ ಕೆಲಸ ಮಾಡಬೇಕು. ರೈತರಿಂದ ಹಣ ಸುಲಿಗೆ ಮಾಡುವುದು ಕೈಬಿಡಬೇಕು. ಟೊಮೇಟೊ ಮಾರುಕಟ್ಟೆ ನಿರ್ಮಾಣ ಮಾಡಲು 10 ಎಕರೆ ಜಮೀನನ್ನು ಗುರುಸಲಾಗಿದೆ. ಈಗಾಗಲೇ ಸಚಿವ ಬಂಡೆಪ್ಪ ಕಾಶಂಪುರ್ ಅವರೊಂದಿಗೆ ಮಾತುಕತೆ ನಡೆಸಿದ್ದೇನೆ. ಕೆಲವು ಜನರು ಉದ್ದೇಶ ಪೂರ್ವಕವಾಗಿ ಆರೋಪಗಳನ್ನು ಮಾಡುತ್ತಿದ್ದಾರೆ. ಇಂತಹ ಆರೋಪಗಳಿಗೆ ಕಿವಿಗೊಡದೆ ನೂತನ ಅಧ್ಯಕ್ಷರು, ಉಪಾಧ್ಯಕ್ಷರು ರಾಜಕೀಯ ಭೇದವಿಲ್ಲದೆ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ರಾಜ್ಯ ಮದ್ಯಪಾನ ಸಂಯಮ ಮಂಡಳಿ ನಿರ್ದೇಶಕ ಟಿ.ಎನ್.ರವಿಚಂದ್ರರೆಡ್ಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ನರೇಂದ್ರ, ಜಿಪಂ ಸದಸ್ಯ ನರಸಿಂಹಪ್ಪ, ಭೂ ಅಭಿವೃದ್ದಿ ಬ್ಯಾಂಕ್ ಅಧ್ಯಕ್ಷ ಶ್ರೀನಿವಾಸರೆಡ್ಡಿ,ಕೋಚಿಮುಲ್ ಮಾಜಿ ಅಧ್ಯಕ್ಷ ವಿ.ಮಂಜುನಾಥರೆಡ್ಡಿ, ತಾಪಂ ಅಧ್ಯಕ್ಷ ಕೆ.ಆರ್.ನರೇಂದ್ರಬಾಬು, ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ, ಎಪಿಎಂಸಿ ಮಾಜಿ ಅಧ್ಯಕ್ಷ ಬಿ.ನಾರಾಯಣರೆಡ್ಡಿ, ಮಾಜಿ ಉಪಾಧ್ಯಕ್ಷ ಎನ್.ರಾಮಚಂದ್ರಪ್ಪ ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News