ಜಯಪುರ: ಕಾಲೇಜು ಕ್ರೀಡಾಕೂಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ
Update: 2018-10-09 18:46 IST
ಜಯಪುರ, ಅ.9: ಬಿಜಿಎಸ್ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಅಕ್ಷತಾ ಜಿ.ಎಚ್.400ಮೀ ಓಟದ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಚಿಕ್ಕಮಗಳೂರಿನಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ 400ಮೀ ಓಟದಲ್ಲಿ ದ್ವಿತೀಯ ಹಾಗೂ 200ಮೀ ಓಟದಲ್ಲಿ ತೃತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಗ್ರಾಮೀಣ ಭಾಗದ ಈ ವಿದ್ಯಾರ್ಥಿನಿ ಈ ಹಿಂದೆ ರಾಜ್ಯಮಟ್ಟಕ್ಕೆ 2 ಬಾರಿ, ಜಿಲ್ಲಾಮಟ್ಟಕ್ಕೆ 6 ಬಾರಿ ಆಯ್ಕೆಯಾಗಿದ್ದರು.