ರಾಮನಗರ ವಿಧಾನಸಭಾ ಉಪಚುನಾವಣೆ: ಜೆಡಿಎಸ್ ಅಭ್ಯರ್ಥಿಯಾಗಿ ಅನಿತಾ ಕುಮಾರಸ್ವಾಮಿ ಕಣಕ್ಕೆ

Update: 2018-10-09 14:21 GMT

ಬೆಂಗಳೂರು, ಅ.9: ರಾಮನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಅವರನ್ನು ಘೋಷಣೆ ಮಾಡಲಾಗಿದೆ. 

ಮಂಗಳವಾರ ರಾಮನಗರದಲ್ಲಿ ನಡೆದ ಜಿಲ್ಲಾ ಜೆಡಿಎಸ್ ಮುಖಂಡರ ಸಭೆಯಲ್ಲಿ ಹಲವರ ವಿರೋಧಮ ವಾಗ್ವಾದ, ಗೊಂದಲ, ಪರಸ್ಪರ ಆರೋಪ-ಪ್ರತ್ಯಾರೋಪಗಳ ನಡುವೆಯೇ ಅನಿತಾ ಕುಮಾರಸ್ವಾಮಿಯನ್ನು ಅಧಿಕೃತ ಅಭ್ಯರ್ಥಿಯೆಂದು ಘೋಷಿಸಲಾಗಿದೆ.

ಕಾರ್ಯಕರ್ತರ ನಡುವೆ ಆರೋಪ, ಪ್ರತ್ಯಾರೋಪ ಉಂಟಾದರೂ ಅಂತಿಮವಾಗಿ ಅನಿತಾ ಕುಮಾರಸ್ವಾಮಿ ಅವರನ್ನೇ ಅಭ್ಯರ್ಥಿಯೆಂದು ಘೋಷಿಸಲು ಒಮ್ಮತದ ತೀರ್ಮಾನಕ್ಕೆ ಬರಲಾಯಿತು. ಹೀಗಾಗಿ ಗುರುವಾರ ಬೆಳಗ್ಗೆ 11ಕ್ಕೆ ರಾಮನಗರದಲ್ಲಿ ದೇವರಿಗೆ ಪೂಜೆ ಸಲ್ಲಿಸಿ ಕಾರ್ಯಕರ್ತರು ಹಾಗೂ ಅಭಿಮಾನಿಗಳ ಸಮ್ಮುಖದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಅನಿತಾಕುಮಾರಸ್ವಾಮಿ ನಾಮಪತ್ರ ಸಲ್ಲಿಸಲಿದ್ದಾರೆ. ನ.3ರಂದು ವಿಧಾನಸಭಾ ಉಪಚುನಾವಣೆಗೆ ಮತದಾನ ನಡೆಯಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News