ಅ. 13ರಂದು ಈಶ್ವರ್ ಖಂಡ್ರೆ ಉಡುಪಿಗೆ

Update: 2018-10-09 14:38 GMT

ಉಡುಪಿ, ಅ.9: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರು ಅ.13ರ ಶನಿವಾರ ಅಪರಾಹ್ನ 2:30ಕ್ಕೆ ಬ್ರಹ್ಮಗಿರಿ ಯಲ್ಲಿರುವ ಕಾಂಗ್ರೆಸ್ ಭವನಕ್ಕೆ ಆಗಮಿಸಲಿದ್ದು, ಜಿಲ್ಲಾ ಕಾಂಗ್ರೆಸ್ ಮಿತಿ ಸಭೆ ಯಲ್ಲಿ ಭಾಗವಹಿಸಲಿದ್ದಾರೆ.

ವಿಧಾನಪರಿಷತ್ ಸದಸ್ಯ ಪ್ರತಾಪಚಂದ್ರ ಶೆಟ್ಟಿ, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ಮಾಜಿ ಶಾಸಕರಾದ ಗೋಪಾಲ ಭಂಡಾರಿ ಹಾಗೂ ಗೋಪಾಲ ಪೂಜಾರಿ, ರಾಜ್ಯ ಇಂಟಕ್ ಅಧ್ಯಕ್ಷ ರಾಕೇಶ್ ಮಲ್ಲಿ ಮತ್ತು ಚುನಾಯಿತ ಜನಪ್ರತಿನಿಧಿಗಳು, ಕೆಪಿಸಿಸಿ ಪದಾಧಿಕಾರಿಗಳು ಮತ್ತು ಸದಸ್ಯರು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಜಿಲ್ಲೆಯ ವಿವಿಧ ಘಟಕಗಳ ಅಧ್ಯಕ್ಷರು, ಜಿಲ್ಲೆಯ ಎಲ್ಲಾ ಬ್ಲಾಕ್ ಅಧ್ಯಕ್ಷರುಗಳ ಉಪಸ್ಥಿತಿಯಲ್ಲಿ ಸಭೆ ನಡೆಯಲಿದ್ದು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜನಾರ್ದನ ತೋನ್ಸೆ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News