×
Ad

ಲೋಕಸಭೆ ಉಪ ಚುನಾವಣೆ ಬಗ್ಗೆ ಸಚಿವ ಶಿವಕುಮಾರ್ ಬೇಸರ

Update: 2018-10-09 20:35 IST

ಬೆಂಗಳೂರು, ಅ.9: ಅತ್ಯಂತ ಕಡಿಮೆ ಅವಧಿಯಲ್ಲಿ ಲೋಕಸಭೆ ಉಪ ಚುನಾವಣೆ ಘೋಷಣೆ ಮಾಡಿರುವುದಕ್ಕೆ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂವರು ಸಂಸದರು ವಿಧಾನಸಭೆಗೆ ಆಯ್ಕೆಯಾಗಿ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದೇ ರೀತಿ ನೆರೆಯ ಆಂಧ್ರ ಪ್ರದೇಶದಲ್ಲೂ ರಾಜೀನಾಮೆ ಕೊಡಲಾಗಿದೆ. ಆದರೆ, ಆಂಧ್ರಪ್ರದೇಶದಲ್ಲಿ ಚುನಾವಣೆ ಘೋಷಣೆಯಾಗಿಲ್ಲ ಎಂದರು.

ಕರ್ನಾಟಕದ ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಸಲಾಗುತ್ತಿದೆ. ಅಕ್ಕ ಪಕ್ಕದ ರಾಜ್ಯಗಳಲ್ಲಿ ಈ ರೀತಿಯ ಕಾನೂನಿನ ತಾರತಮ್ಯ ಇರಲು ಸಾಧ್ಯವೇ ಎಂಬುದನ್ನು ಚುನಾವಣಾ ಆಯೋಗವೇ ಹೇಳಬೇಕು ಎಂದು ಶಿವಕುಮಾರ್ ನುಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News