ಬೆಂಗಳೂರಿನಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ

Update: 2018-10-09 16:04 GMT

ಬೆಂಗಳೂರು, ಅ.9 : ಬೆಂಗಳೂರು ನಗರದ ವಿವಿಧೆಡೆ ಮಂಗಳವಾರ ಸಂಜೆ ಮಳೆಯಾಗಿದ್ದು, ಇನ್ನು ಮೂರು-ನಾಲ್ಕು ದಿನ ಕಾಲ ನಗರದಲ್ಲಿ ಮಳೆ ಮುಂದುವರೆಯುವ ಸಾಧ್ಯತೆಗಳಿವೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ತಿಳಿಸಿದೆ.

ಬಂಗಾಳಕೊಲ್ಲಿಯ ಸಮುದ್ರ ಭಾಗದಲ್ಲಿ ವಾಯುಭಾರ ಕುಸಿದ ಉಂಟಾಗಿದ್ದು, ಭೂ ಭಾಗದ ಮೇಲೆ ಪ್ರಭಾವ ಹೆಚ್ಚಾಗಿದೆ. ಹೀಗಾಗಿ ನಗರದಲ್ಲಿ ಮಳೆಯಾಗುತ್ತಿದೆ. ಉತ್ತರ ಹಾಗೂ ದಕ್ಷಿಣ ಭಾಗದಲ್ಲಿ ಹೆಚ್ಚಿನ ಮಳೆಯಾಗಿದೆ. ಉಳಿದಂತೆ ನಗರದಾದ್ಯಂತ ಹಗುರದಿಂದ ಕೂಡಿದ ಸಾಧಾರಣ ಮಳೆಯಾದ ವರದಿಯಾಗಿವೆ. ಹಲವೆಡೆ ಮಳೆಯಿಂದ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಮತ್ತು ಸಾರ್ವಜನಿಕರು ಪರದಾಡುಂತಾಗಿತ್ತು. ವಿವಿಧ ರಸ್ತೆಗಳಲ್ಲಿ ನೀರು ನಿಂತಿದ್ದರಿಂದ ವಾಹನ ಸವಾರರು ಪರದಾಡುವಂತಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News