ಮನೆಗೆ ನುಗ್ಗಿ ಚಿನ್ನ, ನಗದು ಕಳವು

Update: 2018-10-09 16:09 GMT

ಬೆಂಗಳೂರು, ಅ.9: ಮನೆಯ ಬೀಗ ಮುರಿದು ಒಳನುಗ್ಗಿರುವ ದುಷ್ಕರ್ಮಿಗಳು ಚಿನ್ನ, ನಗದು ದೋಚಿರುವ ಘಟನೆ ಇಲ್ಲಿನ ವಿದ್ಯಾರಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ವಿದ್ಯಾರಣ್ಯಪುರ ಎರಡನೇ ಕ್ರಾಸ್, ವೀಣಮ್ಮ ಗಾರ್ಡನ್ ನಿವಾಸಿ ಮಧು ಅವರ ಮನೆಯಲ್ಲಿ ಕಳ್ಳತನ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಧು ಎರಡು ದಿನಗಳ ಹಿಂದೆ ಮನೆಗೆ ಬೀಗ ಹಾಕಿ ಊರಿಗೆ ಹೋಗಿದ್ದರು. ಸೋಮವಾರ ಬಂದು ನೋಡಿದಾಗ ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ಇತರೆ ಅಮೂಲ್ಯ ವಸ್ತುಗಳು ಕಳುವಾಗಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ವಿದ್ಯಾರಣ್ಯಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News