ಮಾದಕ ವಸ್ತು ಮಾರಾಟ: ಆರೋಪಿ ಬಂಧನ

Update: 2018-10-09 17:02 GMT

ಬೆಂಗಳೂರು, ಅ.9: ಮಾದಕ ವಸ್ತು ಗಾಂಜಾ ಮಾರಾಟ ಮಾಡಲು ಸಂಚು ರೂಪಿಸುತ್ತಿದ್ದ ಆರೋಪಿಯೊಬ್ಬನನ್ನು ಬಂಧಿಸಿರುವ ಸಿಸಿಬಿ ಪೊಲೀಸರು, 3 ಲಕ್ಷ ರೂ. ಮೌಲ್ಯದ 1 ಕೆಜಿ ಗಾಂಜಾ, ಕಾರು ಜಪ್ತಿ ಮಾಡಿದ್ದಾರೆ.

ಸೋಮಣ್ಣ (36) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ವರ್ತೂರು ವೈಟ್‌ಫೀಲ್ಡ್ ಮುಖ್ಯರಸ್ತೆ, ಚೆಲ್ಸಾ ಬೇಕರಿ, ಸ್ವೀಟ್ಸ್ ಅಂಗಡಿ ಮುಂಭಾಗದ ಪಾದಚಾರಿ ರಸ್ತೆ ಹತ್ತಿರ ಬಿಳಿ ಬಣ್ಣದ ಕಾರಿನಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಗಳು ವ್ಯವಸ್ಥಿತ ರೀತಿಯಲ್ಲಿ ಗಾಂಜಾ ಖರೀದಿ ಮಾಡಿಕೊಂಡು ನಗರಕ್ಕೆ ತಂದು ಅದನ್ನು ಅಪರಿಚಿತ ಗಿರಾಕಿಗಳಿಗೆ ಮತ್ತು ಸಾರ್ವಜನಿಕರಿಗೆ ಕಾನೂನು ಬಾಹಿರವಾಗಿ ಮಾರಾಟ ಮಾಡುತ್ತಿದ್ದ ಎನ್ನುವ ಮಾಹಿತಿ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.

ಮಾದಕ ದ್ರವ್ಯ ದಳದ ಸಹಾಯಕ ಪೊಲೀಸ್ ಆಯುಕ್ತ ಬಿ.ಎಸ್. ಮೋಹನ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಕೆ.ನಾರಾಯಣಗೌಡ ಹಾಗೂ ಸಿಬ್ಬಂದಿ ನಯ್, ಶ್ರೀನಿವಾಸ್, ಬಸಪ್ಪ ಡಾಂಗೆ, ಅತೀಫ್ ಹುಸೇನ್ ಮತ್ತು ಇತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News