ವಿಜಯ್ ಹಝಾರೆ ಟ್ರೋಫಿಯಲ್ಲಿ ರೋಹಿತ್ ಶರ್ಮಾ

Update: 2018-10-09 18:44 GMT

ಮುಂಬೈ,ಅ.9: ಟೀಮ್ ಇಂಡಿಯಾದ ಸೀಮಿತ ಓವರ್‌ಗಳ ಕ್ರಿಕೆಟ್ ತಂಡದ ಉಪ ನಾಯಕ ರೋಹಿತ್ ಶರ್ಮಾ ವಿಜಯ್ ಹಝಾರೆ ಟ್ರೋಫಿ ಟೂರ್ನಿಯ ನಾಕೌಟ್ ಹಂತದ ಪಂದ್ಯಗಳಲ್ಲಿ ಆಡಲಿದ್ದಾರೆ. ರೋಹಿತ್ ಶರ್ಮಾ ಅವರು ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿಲ್ಲ. ಈ ಕಾರಣದಿಂದಾಗಿ ಅವರು ದೇಶಿಯ ಟೂರ್ನಿಯಲ್ಲಿ ಆಡುವ ನಿರ್ಧಾರ ಕೈಗೊಂಡಿದ್ದಾರೆ. ಅಕ್ಟೋಬರ್ 10ರಂದು ವಿಜಯ್ ಹಝಾರೆ ಟ್ರೋಫಿ ಟೂರ್ನಿಯ ನಾಕೌಟ್ ಹಂತದ ಪಂದ್ಯಗಳಿಗೆ ಮುಂಬೈ ತಂಡವನ್ನು ಆಯ್ಕೆ ಮಾಡಲಾಗುವುದು ಎಂದು ತಂಡದ ಆಯ್ಕೆ ಸಮಿತಿಯ ಮುಖ್ಯಸ್ಥರಾದ ಅಜಿತ್ ಅಗರ್ಕರ್ ತಿಳಿಸಿದ್ದಾರೆ. ರೋಹಿತ್ ಮುಂಬೈ ತಂಡದ ಪರ ಒಂದು ಅಥವಾ ಎರಡು ಪಂದ್ಯಗಳಲ್ಲಿ ಆಡಲಿದ್ದಾರೆ ಎಂದು ತಂಡದ ನಾಯಕ ಶ್ರೇಯಸ್ ಅಯ್ಯರ್ ಮಾಹಿತಿ ನೀಡಿದ್ದಾರೆ. ವೆಸ್ಟ್‌ಇಂಡೀಸ್ ವಿರುದ್ಧ ಸೀಮಿತ ಓವರ್‌ಗಳ ಸರಣಿಗೆ ರೋಹಿತ್ ಶರ್ಮಾ ವಿಜಯ್ ಹಝಾರೆ ಟ್ರೋಫಿಯಲ್ಲಿ ಆಡುವ ಮೂಲಕ ತಯಾರಿ ನಡೆಸಲಿದ್ದಾರೆ.

ರೋಹಿತ್ ಇತ್ತೀಚೆಗೆ ನಡೆದ ಏಶ್ಯಕಪ್ ಟೂರ್ನಮೆಂಟ್‌ನಲ್ಲಿ ಭಾರತ ತಂಡವನ್ನು ನಾಯಕರಾಗಿ ಮುನ್ನಡೆಸಿದ್ದರು. ಭಾರತಕ್ಕೆ ಚಾಂಪಿಯನ್ ಪಟ್ಟವನ್ನು ತಂದುಕೊಡುವಲ್ಲಿ ಶ್ರಮಿಸಿದ್ದರು. ಟೂರ್ನಿಯಲ್ಲಿ ಗರಿಷ್ಠ ಸ್ಕೋರ್ ದಾಖಲಿಸಿದ ಎರಡನೇ ದಾಂಡಿಗ ಎನಿಸಿಕೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News