ಅಜ್ಜರಕಾಡು: ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Update: 2018-10-10 12:54 GMT

ಉಡುಪಿ, ಅ.10: ಅಜ್ಜರಕಾಡು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಮನಶಾಸ್ತ್ರ ವಿಭಾಗ, ಐಕ್ಯುಎಸಿ ಘಟಕ ಹಾಗೂ ಮಣಿಪಾಲ ನರ್ಸಿಂಗ್ ಕಾಲೇಜಿನ ಸಹಯೋಗದೊಂದಿಗೆ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಬುಧವಾರ ಕಾಲೇಜಿನಲ್ಲಿ ಆಯೋಜಿಸಲಾಗಿತ್ತು.

ಅಧ್ಯಕ್ಷತೆಯನ್ನು ಪ್ರಭಾರ ಪ್ರಾಂಶುಪಾಲ ಪ್ರೊ.ರಾಮಚಂದ್ರ ಅಡಿಗ ಜಿ. ವಹಿಸಿದ್ದರು. ಮಣಿಪಾಲ ನರ್ಸಿಂಗ್ ಕಾಲೇಜಿನ ಸಹಪ್ರಾಧ್ಯಾಪಕಿ ಸವಿತಾ ಮಾತನಾಡಿದರು. ಮನೋ ವೈದ್ಯಕೀಯ ಶುಶ್ರೂಷೆ ವಿದ್ಯಾರ್ಥಿನಿ ಪೂಜಾ ಬಕ್ಷಿ ಬದಲಾವಣೆಯ ಜಗತ್ತಿನಲ್ಲಿ ಯುವಜನತೆ ಹಾಗೂ ಮಾನಸಿಕ ಆರೋಗ್ಯದ ಬಗ್ಗೆ ವಿಶೇಷ ಮಾಹಿತಿ ನೀಡಿದರು.

ಶಿರ್ವ ಸೈಂಟ್ ಮೇರಿಸ್ ಕಾಲೇಜಿನ ಜಿನಿಟ, ಸೌಧಾಯಿನಿ, ವೀಣಾ ಮತ್ತು ದೀಪಾ ವಿದ್ಯಾರ್ಥಿನಿಯರಿಗೆ ಹಲವು ಚಟುವಟಿಕೆಗಳನ್ನು ನಡೆಸಿದರು. ಕಲಾ ನಿಕಾಯದ ಡೀನ್ ಪೊ್ರ.ಸೋಜನ್ ಕೆ.ಜಿ. ಉಪಸ್ಥಿತರಿದ್ದರು.

ಕಾಲೇಜಿನ ಮನೋವಿಜ್ಞಾನ ವಿಭಾಗದ ಮುಖ್ಯಸ್ಥೆ ಡಾ.ವಾಣಿ ಆರ್. ಬಲ್ಲಾಳ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮನೋವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕಿ ರಮ್ಯ ವಿ. ವಂದಿಸಿದರು. ಪರಿಪೂರ್ಣ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News