ಬಂಟ್ವಾಳ-ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್: ಅಧ್ಯಕ್ಷರಾಗಿ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ ನೇಮಕ

Update: 2018-10-10 14:07 GMT
ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ

ಬಂಟ್ವಾಳ, ಅ. 10: ಸುದೀರ್ಘ ಎಂಟು ವರ್ಷದ ಬಳಿಕ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್‍ನ ಅಧ್ಯಕ್ಷರನ್ನು ಬದಲಾಯಿಸಿ ಕೆಪಿಸಿಸಿ ಆದೇಶ ಹೊರಡಿಸಿದೆ.

ಬಂಟ್ವಾಳ ಬ್ಲಾಕ್ ಕಾಂಗ್ರೆಸ್‍ಗೆ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್‍ಗೆ ಸುದೀಪ್ ಕುಮಾರ್ ಶೆಟ್ಟಿ ಮಾಣಿ ಅವರನ್ನು ನೂತನ ಅಧ್ಯಕ್ಷರನ್ನಾಗಿ ನೇಮಕಗೊಳಿಸಿ ಎಂದು ಕೆಪಿಸಿಸಿ ಆದೇಶಿಸಿದೆ. ಮಾಜಿ ಸಚಿವ ಬಿ.ರಮಾನಾಥ ರೈ ಅವರ ಶಿಫಾರಸಿನ ಮೇರೆಗೆ ಈ ನೇಮಕಾತಿ ಮಾಡಲಾಗಿದೆ.

ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಮಾಯಿಲಪ್ಪ ಸಾಲಿಯಾನ್ ಮತ್ತು ಅಬ್ಬಾಸ್ ಅಲಿ ಅವರು ಸುದೀರ್ಘ ಎಂಟು ವರ್ಷಗಳ ಕಾಲ ಅಧ್ಯಕ್ಷರಾಗಿ ಕಾರ್ಯಭಾರಮಾಡಿದ್ದರು. 2010ರ ಆಗಸ್ಟ್‍ನಲ್ಲಿ ಅಧ್ಯಕ್ಷರಾಗಿ ನೇಮಕವಾಗಿದ್ದ ಇವರಿಬ್ಬರು 2018ರ ಸೆಪ್ಟಂಬರ್ ಅಂತ್ಯದವೆರೆಗೂ ಅಧ್ಯಕ್ಷರಾಗಿ ಪಕ್ಷವನ್ನು ಮುನ್ನಡೆಸುವಲ್ಲಿ ಯಶಸ್ವಿಯಾಗಿದ್ದರು.

ಕಬಡ್ಡಿ ಆಟಗಾರ

ಬಂಟ್ವಾಳ ಬ್ಲಾಕ್ ಕಾಂಗ್ರೆಸ್‍ನ ನೂತನ ಅಧ್ಯಕ್ಷ ಬೇಬಿ ಕುಂದರ್ ಅವರು ರಾಷ್ಟ್ರೀಯ ಮಟ್ಟದ ಕಬಡ್ಡಿ ಆಟಗಾರ, ವಿಜಯಬ್ಯಾಂಕ್ ಬಂಟ್ವಾಳ ಶಾಖೆಯಲ್ಲಿ ಮ್ಯಾನೇಜರ್ ಕಾರ್ಯನಿರ್ವಹಿಸುತ್ತಿದ್ದರು. ಕಳೆದ ವಿಧಾನಸಭಾ ಚುನಾವಣೆಯ ವೇಳೆ ಬ್ಯಾಂಕ್ ವೃತ್ತಿಗೆ ಸ್ವಯಂ ನಿವೃತ್ತಿ ಘೋಷಿಸಿ, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ ದಕ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿದ್ದರು. ಆ ಬಳಿಕ ಪಕ್ಷದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು. ಮಾಜಿ ಸಚಿವ ರಮಾನಾಥ ರೈ ಅವರ ಆಪ್ತರಲ್ಲೊಬ್ಬರಾಗಿರುವ ಬೇಬಿ ಕುಂದರ್ ಅವರು, ಅಮೆಚೂರು ಕಬಡ್ಡಿ ಅಸೋಸಿಯೇಶನ್‍ನ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರೂ ಆಗಿದ್ದಾರೆ.   

ಗ್ರಾಪಂ ಸದಸ್ಯ:

ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್‍ನ ನೂತನ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಅವರು ಮಾಣಿ ಗ್ರಾಪಂ ಸದಸ್ಯರಾಗಿದ್ದಾರೆ. ಮಾಣಿ ಯುವಕ ಮಂಡಲದ ಅಧ್ಯಕ್ಷರಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News