ಲೋಕಸಭಾ ಉಪ ಚುನಾವಣೆ ರದ್ದು ಕೋರಿ ಪಿಐಎಲ್ ಸಲ್ಲಿಕೆ

Update: 2018-10-10 16:41 GMT

ಬೆಂಗಳೂರು, ಅ.10: ಲೋಕಸಭೆಗೆ ಸಾರ್ವತ್ರಿಕ ಚುನಾವಣೆ ನಡೆಯಲು ಕೆಲವೇ ತಿಂಗಳು ಬಾಕಿಯಿರುವ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗವು ರಾಜ್ಯದ ಮೂರು ಲೋಕಸಭಾ ಕ್ಷೇತ್ರಗಳಿಗೆ ಘೋಷಿಸಿರುವ ಉಪ ಚುನಾವಣೆ ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಕೆಯಾಗಿದೆ.

ಹೈಕೋರ್ಟ್‌ನ ವಕೀಲ ಎ.ಪಿ.ರಂಗನಾಥ್ ಪಿಐಎಲ್ ಸಲ್ಲಿಕೆ ಮಾಡಿದ್ದು, ತುರ್ತು ವಿಚಾರಣೆ ನಡೆಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ನಿಯಮಾವಳಿಗಳ ಪ್ರಕಾರ ಹೈಕೋರ್ಟ್‌ನ ರಿಜಿಸ್ಟ್ರಾರ್ ಎದುರು ಮನವಿ ಸಲ್ಲಿಸುವಂತೆ ಮುಖ್ಯ ನ್ಯಾಯಮೂರ್ತಿ ಸೂಚಿಸಿದ್ದಾರೆ.

ಈ ಉಪ ಚುನಾವಣೆಯಲ್ಲಿ ಆಯ್ಕೆಯಾಗುವ ಸಂಸದರು ಕೇವಲ ಮೂರರಿಂದ ನಾಲ್ಕು ತಿಂಗಳುಗಳ ಕಾಲ ಮಾತ್ರ ಸಂಸದರಾಗಿರುತ್ತಾರೆ. ಆನಂತರ, ಲೋಕಸಭೆಗೆ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಈಗ ಉಪ ಚುನಾವಣೆ ನಡೆಸುವುದರಿಂದ ಸಾರ್ವಜನಿಕರ ತೆರಿಗೆ ಹಣ ಪೋಲು ಆಗುತ್ತದೆ. ಆದುದರಿಂದ, ಈ ಉಪ ಚುನಾವಣೆಗೆ ತಡೆ ನೀಡುವಂತೆ ರಂಗನಾಥ್ ಅರ್ಜಿಯಲ್ಲಿ ಮನವಿ ಸಲ್ಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News