ಮಿಥುನ್ ರೈ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಸಚಿವ ಝಮೀರ್ ಅಹ್ಮದ್‌ಗೆ ಇಂಟಕ್ ಯುವ ಘಟಕ ಮನವಿ

Update: 2018-10-11 12:17 GMT

ಮಂಗಳೂರು, ಅ.11: ಕಾರ್ಯಕ್ರಮವೊಂದರಲ್ಲಿ ಪಕ್ಷದ ಹಿರಿಯ ನಾಯಕರ ಸಮ್ಮುಖವೇ ಹಲ್ಲೆ ನಡೆಸಿದ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಮತ್ತಾತನ ಬೆಂಬಲಿಗರ ಮೇಲೆ ಶಿಸ್ತು ಕ್ರಮ ಜರಗಿಸಬೇಕು ಎಂದು ಮಂಗಳೂರು ನಗರ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಯುವ ಇಂಟಕ್ ಅಧ್ಯಕ್ಷ ಪುನೀತ್ ಶೆಟ್ಟಿ ಸಚಿವ ಝಮೀರ್ ಅಹ್ಮದ್‌ ರಿಗೆ ಗುರುವಾರ ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಮನವಿ ಸಲ್ಲಿಸಿದ್ದಾರೆ.

ಕಳೆದೊಂದು ವರ್ಷದಿಂದ ಕಾಂಗ್ರೆಸ್‌ನ ಕಾರ್ಮಿಕ ಘಟಕವಾದ ಇಂಟಕ್‌ನಲ್ಲಿ ತೊಡಗಿಸಿಕೊಂಡಿದ್ದೇನೆ. ಪಕ್ಷಕ್ಕಾಗಿ ಹಗಲಿರುಳು ಶ್ರಮಿಸುತ್ತಿದ್ದೇನೆ. ಇದನ್ನು ಸಹಿಸದ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ನನ್ನ ಮೇಲೆ ವೈಮನಸ್ಸು ಹೊಂದಿ, ಹಗೆ ಸಾಧಿಸುತ್ತಿದ್ದರು. ಅಲ್ಲದೆ ಎನ್‌ಎಸ್‌ಯುಐ ಸಂಘಟನೆಯನ್ನು ಜಿಲ್ಲೆಯಲ್ಲಿ ಬೆಳೆಯದಂತೆ ಮಾಡಿ ತನ್ನದೇ ಆದ ವಿದ್ಯಾರ್ಥಿ ಸಂಘಟನೆಯನ್ನು ಕಟ್ಟಿ ಪಕ್ಷದ್ರೋಹ ಎಸಗಿದ್ದಾರೆ. ಅಲ್ಲದೆ ಪಕ್ಷದ ಕಾರ್ಯಕ್ರಮವೊಂದರಲ್ಲಿ ಹಿರಿಯ ನಾಯಕರ ಸಮ್ಮುಖದಲ್ಲೇ ಹಲ್ಲೆ ನಡೆಸಿ ಪಕ್ಷದ ವರ್ಚ್ಛಸ್ಸಿಗೆ ಹಾನಿ ಎಸಗಿದ್ದಾರೆ. ಹಾಗಾಗಿ ಮಿಥುನ್ ರೈ ವಿರುದ್ಧ ಸೂಕ್ತ ಕ್ರಮ ಜರಗಿಸಬೇಕು ಎಂದು ಪುನೀತ್ ಶೆಟ್ಟಿ ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News