×
Ad

ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Update: 2018-10-11 20:28 IST

ಉಡುಪಿ, ಅ.11: ಉಡುಪಿ ತಾಲೂಕಿನ ವಿದ್ಯಾ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿಯ ನವೀನ ಮತ್ತು ನವೀಕರಣ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಮಂಜೂರು ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

 ಅರ್ಜಿದಾರ ವಿದ್ಯಾರ್ಥಿಗಳು ಕಲಿಯುತ್ತಿರುವ ಶಾಲಾ/ ಕಾಲೇಜುಗಳ ಮುಖ್ಯಸ್ಥರು, ಸಂಬಂಧಿಸಿದ ದಾಖಲೆಗಳೊಂದಿಗೆ ನೇರವಾಗಿ ಪರಿಶಿಷ್ಟ ಜಾತಿ ಇಲಾಖೆಯ ವೆಬ್‌ಸೈಟ್‌ಗೆ-www.sw.kar.nic.in-ಲಾಗಿನ್ ಆಗಿ ಸಂಪೂರ್ಣ ಮಾಹಿತಿಯನ್ನು (ಆಧಾರ್ ಕಾರ್ಡ್, ಬ್ಯಾಂಕ್ ಖಾತೆ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ) ನೀಡಿ ಕಡ್ಡಾಯವಾಗಿ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ದಾಖಲಿಸಬೇಕು. ಇದರ ದೃಢೀಕೃತ ಪ್ರತಿಯೊಂದಿಗೆ ಕಾಲೇಜು ಮುಖಾಂತರ ಅರ್ಜಿಯನ್ನು ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ತಾಲೂಕು ಪಂಚಾಯತ್ ಆವರಣ, ಉಡುಪಿ ಇಲ್ಲಿಗೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನ ನ.15. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2528884ನ್ನು ಸಂಪರ್ಕಿಸುವಂತೆ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಉಡುಪಿ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಲು ಕೊನೆಯ ದಿನ ನ.15. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2528884ನ್ನು ಸಂಪರ್ಕಿಸುವಂತೆ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಉಡುಪಿ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News