ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ: 1.9 ಕೆಜಿ ಗಾಂಜಾ ಜಪ್ತಿ

Update: 2018-10-11 15:01 GMT

ಬೆಂಗಳೂರು, ಅ.11: ಆಟೊ ರಿಕ್ಷಾದಲ್ಲಿ ಮಾದಕ ವಸ್ತು ಗಾಂಜಾವನ್ನಿಟ್ಟುಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ಬಂಧಿಸಿರುವ ಸಿಸಿಬಿ ಪೊಲೀಸರು, 1.20 ಲಕ್ಷ ರೂ. ಮೌಲ್ಯದ 1.9 ಕೆಜಿ ಗಾಂಜಾ ಜಪ್ತಿ ಮಾಡಿದ್ದಾರೆ.

ಹೆಬ್ಬಾಳದ ಅಕ್ರಮ್ ಪಾಷ (40) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ರಾಮಮೂರ್ತಿ ನಗರದ ರಿಂಗ್ ರಸ್ತೆ, ರೈಲ್ವೆ ನಿಲ್ದಾಣದ ಬಳಿ ಮಾದಕ ವಸ್ತು ಗಾಂಜಾ ಮಾರಾಟ ಮಾಡಲು ಆಟೊದಲ್ಲಿ ಬರುತ್ತಿದ್ದ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸಿ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಕೋಲಾರದಿಂದ ಆರೋಪಿಯು ಗಾಂಜಾ ಖರೀದಿಸಿ ಅದನ್ನು ನಗರದೆಲ್ಲೆಡೆ ಮಾರಾಟ ಮಾಡಲು ವ್ಯವಸ್ಥಿತ ರೀತಿಯಲ್ಲಿ ಸಂಘಟಿಸುತ್ತಿದ್ದ ಎಂದು ತಿಳಿದುಬಂದಿದ್ದು, ಈ ಸಂಬಂಧ ಮೊಕದ್ದಮೆ ದಾಖಲಿಸಿ ತನಿಖೆ ಮುಂದುವರೆಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News