ವೃತ್ತಿ ಪ್ರೋತ್ಸಾಹ ಯೋಜನೆ: ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

Update: 2018-10-11 15:03 GMT

ಉಡುಪಿ, ಅ.11: ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ದಿ ನಿಗಮವು 2018-19ನೇ ಸಾಲಿನಲ್ಲಿ ಅನುಷ್ಟಾನಗೊಳಿಸುತ್ತಿರುವ ವೃತ್ತಿ ಪ್ರೋತ್ಸಾಹ ಯೋಜನೆಯಡಿ ಮತೀಯ ಅಲ್ಪಸಂಖ್ಯಾತರಿಂದ ಶೇ.80ರಷ್ಟು ಮುಸ್ಲಿಂ, ಶೇ.10ರಷ್ಟು ಕ್ರೈಸ್ತರು ಹಾಗೂ ಶೇ.10ರಷ್ಟು ಇತರೆ (ಜೈನರು, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ) ಅಲ್ಪಸಂಖ್ಯಾತ ಜನಾಂಗದಿಂದ ಅರ್ಜಿ ಆಹ್ವಾನಿಸಲಾಗಿದೆ.

ವೃತ್ತಿ ಪ್ರೋತ್ಸಾಹ ಯೋಜನೆ: ಈ ಯೋಜನೆಯಡಿ ಹಣ್ಣು ಮತ್ತು ತರಕಾರಿ ಮಾರಾಟ ಅಂಗಡಿ, ಮಾಂಸದ ಅಂಗಡಿ/ಮೀನು ಮಾರಾಟ, ಹೈನುಗಾರಿಕೆ/ ಎಳನೀರು/ ಕಬ್ಬಿನ ಹಾಲು ಮಾರಾಟ ಅಂಗಡಿ, ತಂಪು ಪಾನೀಯ ಮಾರಾಟ ಅಂಗಡಿ, ಬೇಕರಿ, ಲಾಂಡ್ರಿ, ಡ್ರೈ ಕ್ಲೀನಿಂಗ್, ಎ.ಸಿ. ರಿಪೇರಿ, ರೆಫ್ರಿಜರೇಟರ್, ಮೋಟಾರ್ ರಿವೈಂಡಿಗ್ ವರ್ಕ್ಸ್, ವಾಟರ್‌ವಾಷ್ ಸರ್ವೀಸ್, ಪಂಚರ್ ಶಾಪ್, ಗ್ಯಾಸ್ ವೆಲ್ಡಿಂಗ್, ಮೆಕ್ಯಾನಿಕ್, ಕಾರ್ ಪೆಂಟರ್, ಎಲೆಕ್ಟ್ರಿಕಲ್/ ಎಲೆಕ್ಟ್ರಾನಿಕ್ ರಿಪೇರಿ ಇತ್ಯಾದಿ ವೃತ್ತಿಗಳಿಗೆ 2 ಲಕ್ಷ ರೂ. ಘಟಕ ವೆಚ್ಚಗಳಿಗೆ ಅಗತ್ಯವಿರುವ ಬಂಡವಾಳಕ್ಕಾಗಿ ರಾಷ್ಟ್ರೀಕೃತ ಬ್ಯಾಂಕ್‌ನಿಂದ ಪಡೆಯುವ ಒಂದು ಲಕ್ಷರೂ. ಸಾಲಕ್ಕೆ, 1 ಲಕ್ಷ ರೂ. ಸಹಾಯಧನ ಮಂಜೂರು ಮಾಡಲಾಗುವುದು.

ಅರ್ಜಿದಾರರು ಕರ್ನಾಟಕದಲ್ಲಿ ಖಾಯಂ ನಿವಾಸಿಯಾಗಿದ್ದು, ಕುಟುಂಬದ ವಾರ್ಷಿಕ ಆದಾಯ ಗ್ರಾಮೀಣ ಪ್ರದೇಶದವರಿಗೆ 81,000 ರೂ. ಹಾಗೂ ನಗರ ಪ್ರದೇಶದವರಿಗೆ 1,03,000 ರೂ. ಮೀರಿರಬಾರದು.

ಅರ್ಜಿದಾರರ ವಯಸ್ಸು ಕನಿಷ್ಟ 18ರಿಂದ ಗರಿಷ್ಟ 45 ವರ್ಷಗಳಾಗಿದ್ದು, ಮಹಿಳೆಯರಿಗೆ ಆದ್ಯತೆ ನೀಡಲಾಗುವುದು. ಪಡಿತರ ಚೀಟಿ, ಆಧಾರ್ ಕಾರ್ಡ್ ಹೊಂದಿರಬೇಕು. ಅರ್ಜಿ ನಮೂನೆಯನ್ನು ಜಿಲ್ಲಾ ವ್ಯವಸ್ಥಾಪಕರ ಕಚೇರಿ, ರಜತಾದ್ರಿ, ಜಿಲ್ಲಾಧಿಕಾರಿಗಳ ಸಂಕೀರ್ಣ, ಮಣಿಪಾಲ, ಉಡುಪಿ ಜಿಲ್ಲೆ ಈ ಕಚೇರಿಯಿಂದ ಪಡೆದು, ದಾಖಲೆಗಳೊಂದಿಗೆ ಅ.31ರೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿಯನ್ನು ಸಂಪರ್ಕಿಸುವಂತೆ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಉಡುಪಿ ಇವರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News