ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯಲು ಜೆಪಿ ಕ್ರಾಂತಿ ಪ್ರೇರಣೆ: ಮಾಜಿ ಡಿಸಿಎಂ ಆರ್.ಅಶೋಕ್

Update: 2018-10-11 15:04 GMT

ಬೆಂಗಳೂರು, ಅ. 11: ದೇಶದಲ್ಲಿ ಜಯಪ್ರಕಾಶ್ ನಾರಾಯಣ್ ಅವರ ಸಂಪೂರ್ಣ ಕ್ರಾಂತಿಯ ನಂತರ ದೇಶದಲ್ಲಿ ಪ್ರಜಾಪ್ರಭುತ್ವದ ಮರುಹುಟ್ಟು ಆಯಿತು ಎಂದು ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ಹೇಳಿದರು. 

ಗುರುವಾರ ನಗರದ ಕೇಂದ್ರ ಸಚಿವ ಅನಂತಕುಮಾರ್ ಅವರ ಕಚೇರಿಯಲ್ಲಿ ನಡೆದ ಲೋಕನಾಯಕ ಜಯಪ್ರಕಾಶ್ ನಾರಾಯಣ್ ಹಾಗೂ ನಾನಾಜಿ ದೇಶಮುಖ್ ಅವರ ಜನ್ಮ ಜಯಂತಿ ಕಾರ್ಯಕ್ರಮದಲ್ಲಿ ಸರ್ವಾಧಿಕಾರ ಹಾಗೂ ಪ್ರಜಾಪ್ರಭುತ್ವ ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ದೇಶದಲ್ಲಿ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಂಡ ಅವರು, ಇಂದಿರಾಗಾಂಧಿ ಅವರು ಹೇರಿದ್ದ ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಜನಸಾಮಾನ್ಯರು ತಮ್ಮ ಸ್ವಾತಂತ್ರವನ್ನು ಕಳೆದುಕೊಂಡಿದ್ದರು ಎಂದು ಹೇಳಿದರು.

ಆ ಪರಿಸ್ಥಿತಿಯ ನಂತರ ತಮ್ಮ ಜೀವವನ್ನು ಕೈಯಲ್ಲಿ ಹಿಡಿದಿಟ್ಟುಕೊಂಡು ಬದುಕುತ್ತಿದ್ದೆ. ಎರಡು ವರ್ಷಗಳ ನಂತರ ನಡೆದ ಚುನಾವಣೆಯಲ್ಲಿ ಜನತಾ ಪಕ್ಷ ದೇಶದ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಯಿತು. ಆ ನಂತರವಷ್ಟೇ ನೆಮ್ಮದಿಯ ನಿಟ್ಟುಸಿರು ಬಿಡಲು ಸಾಧ್ಯವಾಯಿತು ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News