ಎಸ್.ಜೆ.ಸದಾಶಿವ ಆಯೋಗದ ವರದಿ ಅಧ್ಯಯನ ಮಾಡಿ ಅಗತ್ಯ ಕ್ರಮ: ಕುಮಾರಸ್ವಾಮಿ

Update: 2018-10-12 12:00 GMT

ಬೆಂಗಳೂರು, ಅ. 12: ಪರಿಶಿಷ್ಟ ಜಾತಿಯ ಒಳ ಮೀಸಲಾತಿ ವರ್ಗೀಕರಣ ಸಂಬಂಧದ ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿಯನ್ನು ಅಧ್ಯಯನ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಇಂದಿಲ್ಲಿ ಭರವಸೆ ನೀಡಿದ್ದಾರೆ.

ಶುಕ್ರವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನ್ಯಾ.ಸದಾಶಿವ ಆಯೋಗದ ವರದಿ ಸಂಬಂಧ ಸಚಿವರು, ಸಂಸದರು ಹಾಗೂ ಶಾಸಕರೊಂದಿಗೆ ಚರ್ಚಿಸಿದ ಬಳಿಕ ಮಾತನಾಡಿದ ಅವರು, ಪರಿಶಿಷ್ಟರ ಮೀಸಲಾತಿ ವರ್ಗೀಕರಣ ಸಂಬಂಧದ ಸದಾಶಿವ ಆಯೋಗದ ವರದಿಯನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ಅನುಷ್ಟಾನದ ಭರವಸೆ: ‘ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿಯ ಬಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಗಮನಕ್ಕೆ ತಂದಿದ್ದು, ಅವರು ವರದಿಯನ್ನು ಅಧ್ಯಯನ ನಡೆಸಿ ಶೀಘ್ರದಲ್ಲೆ ಸೂಕ್ತ ತೀರ್ಮಾನ ಕೈಗೊಳ್ಳುವ ಭರವಸೆ ನೀಡಿದ್ದಾರೆ’ ಎಂದು ಮಾಜಿ ಸಚಿವ ಎಚ್.ಆಂಜನೇಯ ತಿಳಿಸಿದರು.

ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ, ಸಂಸದರಾದ ಕೆ.ಎಚ್. ಮುನಿಯಪ್ಪ, ಚಂದ್ರಪ್ಪ, ಮಾಜಿ ಸಚಿವ ಆರ್.ಬಿ.ತಿಮ್ಮಾಪುರ, ರಾಜ್ಯಸಭಾ ಸದಸ್ಯ ಡಾ.ಎಲ್.ಹನುಮಂತಯ್ಯ, ಪರಿಷತ್ ಸದಸ್ಯ ಧರ್ಮಸೇನ, ಮಾದಿಗ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಅಂಬಣ್ಣ ಸೇರಿದಂತೆ ಹಲವು ಮುಖಂಡರು ಪಾಲ್ಗೊಂಡಿದ್ದರು.

‘ಪರಿಶಿಷ್ಟರ ಮೀಸಲಾತಿ ವರ್ಗೀಕರಣ ಸಂಬಂಧದ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯ ಸಾಧಕ-ಬಾಧಕಗಳ ಬಗ್ಗೆ ಮತ್ತೊಮ್ಮೆ ಅಧ್ಯಯನ ನಡೆಸಿ, ಆ ಬಳಿಕ ಚರ್ಚಿಸಿ ವರದಿಯನ್ನು ಅನುಷ್ಟಾನಕ್ಕೆ ತರಲು ತೀರ್ಮಾನ ಮಾಡಲಾಗಿದೆ’

-ಪ್ರಿಯಾಂಕ್ ಖರ್ಗೆ ಸಮಾಜ ಕಲ್ಯಾಣ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News