ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ: ಮುಖ್ಯಮಂತ್ರಿ ಕುಮಾರಸ್ವಾಮಿ

Update: 2018-10-12 10:35 GMT

ಬೆಂಗಳೂರು, ಅ.12: ಕೃಷಿ, ತೋಟಗಾರಿಕೆ, ಲೋಕೋಪಯೋಗಿ ಹಾಗೂ ಪಶು ಸಂಗೋಪನೆ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಚರ್ಚಿಸಲಾಯಿತು.

ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ವಿವರವಾದ ಪ್ರಸ್ತಾವಬನ್ನು ಸರ್ಕಾರಕ್ಕೆ ಸಲ್ಲಿಸಿದ ನಂತರ, ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ಮುಖ್ಯಮಂತ್ರಿ ತಿಳಿಸಿದರು.

ಸಭೆಯಲ್ಲಿ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ, ತೋಟಗಾರಿಕೆ ಸಚಿವ ಮನಗೂಳಿ ಮಲ್ಲಪ್ಪ ಚನ್ನವೀರಪ್ಪ, ಪಶು ಸಂಗೋಪನೆ ಮತ್ತು ಮೀನುಗಾರಿಕೆ ಸಚಿವ ವೆಂಕಟರಾವ್ ನಾಡಗೌಡ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಟಿ.ಎಂ.ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ, ಲೋಕೋಪಯೋಗಿ ಮತ್ತು ಒಳಾಡಳಿತ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್ ಹಾಗೂ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News