ಸರಕಾರಿ ನೌಕರರಿಗೆ ಶೇ.2 ರಷ್ಟು ತುಟ್ಟಿಭತ್ಯೆ ಹೆಚ್ಚಳ: ರಾಜ್ಯ ಸರಕಾರ ಆದೇಶ

Update: 2018-10-12 15:03 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಅ. 12: ಪೆಟ್ರೋಲ್, ಡಿಸೇಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆಯಲ್ಲಿ ರಾಜ್ಯ ಸರಕಾರಿ ನೌಕರರಿಗೆ ಶೇ.2ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ.

‘ದಸರಾ’ ಹಿನ್ನೆಲೆಯಲ್ಲಿ ರಾಜ್ಯ ಸರಕಾರಿ ನೌಕರರಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ಕೊಡುಗೆ ನೀಡಿದೆ. ಸರಕಾರಿ ನೌಕರರಿಗೆ 2018ರ ಪರಿಷ್ಕೃತ ವೇತನದ ಶ್ರೇಣಿಯಲ್ಲಿ 2018ರ ಜುಲೈ 1ರಿಂದ ಪೂರ್ವಾನ್ವಯ ಆಗುವಂತೆ ತುಟ್ಟಿಭತ್ಯೆ ದರವನ್ನು ಮೂಲ ವೇತನದ ಶೇ.1.75ರಿಂದ ಶೇ.3.75ಕ್ಕೆ ಹೆಚ್ಚಿಸಿದೆ.

ರಾಜ್ಯ ಸರಕಾರದ ಮತ್ತು ಜಿಲ್ಲಾ ಪಂಚಾಯತ್‌ಗಳ ಪೂರ್ಣಾವಧಿ ನೌಕರರಿಗೆ, ಕಾಲಿಕ ವೇತನ ಶ್ರೇಣಿಯಲ್ಲಿರುವ ಪೂರ್ಣಾವಧಿ ನೌಕರರಿಗೆ ಹಾಗೂ ಸರಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆ ಮತ್ತು ವಿಶ್ವ ವಿದ್ಯಾಲಯಗಳಲ್ಲಿನ ಕಾಲಿಕ ವೇತನ ಶ್ರೇಣಿ ನೌಕರರಿಗೆ ಈ ಆದೇಶ ಅನ್ವಯವಾಗಲಿದೆ.

2006ರ ಪರಿಷ್ಕೃತ ಯುಜಿಸಿ/ಎಐಸಿಎಆರ್/ಎನ್‌ಜೆಪಿಸಿ ವೇತನ ಶ್ರೇಣಿಗಳಲ್ಲಿ ಹಾಲಿ ವೇತನ ಪಡೆಯುತ್ತಿರುವ ನೌಕರರಿಗೆ ಮತ್ತು ಎನ್‌ಜೆಪಿಸಿ ಪಿಂಚಣಿದಾರರಿಗೆ ಸಂಬಂಧಿಸಿದಂತೆ ಪ್ರತ್ಯೇಕ ಆದೇಶ ಹೊರಡಿಸಲಾಗುವುದು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News