ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ

Update: 2018-10-12 16:07 GMT

ಹೆಬ್ರಿ, ಅ.12: ವೈಯಕ್ತಿಕ ಕಾರಣದಿಂದ ಮನನೊಂದ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮೃತರನ್ನು ಕುಸುಮಾ ಹೆಗ್ಡೆ(45) ಎಂದು ಗುರುತಿಸಲಾಗಿದೆ.

ಇವರು ಅ.11ರಂದು ಮಧ್ಯಾಹ್ನ ಮನೆಯಲ್ಲಿ ವಿಷ ಸೇವಿಸಿದರೆನ್ನಲಾಗಿದೆ. ತೀವ್ರ ಅಸ್ವಸ್ಥ ಗೊಂಡ ಇವರು ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅ.12ರಂದು ನಸುಕಿನ ವೇಳೆ ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News