ರಾಹುಲ್ ಭೇಟಿ ಬಳಿಕ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಗೆ ನಿರ್ಧಾರ

Update: 2018-10-13 04:42 GMT

ಬೆಂಗಳೂರು, ಅ.13: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಚರ್ಚಿಸಿದ ಬಳಿಕ ಶಿವಮೊಗ್ಗ ಲೋಕಸಭಾ ಕ್ಷೇತ್ರದ   ಉಪಚುನಾವಣೆಗೆ   ಅಭ್ಯರ್ಥಿಯನ್ನು ಆಯ್ಕೆ ಮಾಡುವ ಬಗ್ಗೆ ಕಾಂಗ್ರೆಸ್ ಮತ್ತು ಜೆಡಿಎಸ್ ನ ನಾಯಕರು ನಿರ್ಧಾರ ಕೈಗೊಂಡಿದ್ದಾರೆ.

ಶಿವಮೊಗ್ಗ  ಕ್ಷೇತ್ರಕ್ಕೆ ಅಭ್ಯರ್ಥಿಯ ಆಯ್ಕೆಗೆ ನಾನಾ ಸವಾಲು ಎದುರಾಗಿದೆ. ಉಭಯ ಪಕ್ಷಗಳಿಂದಲೂ ಒಮ್ಮತದ ಆಯ್ಕೆ ಈ ವರೆಗೆ ಸಾಧ್ಯವಾಗಿಲ್ಲ. ಎರಡೂ ಪಕ್ಷಗಳಿಂದಲೂ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದೆ. ಈ ಕಾರಣದಿಂದಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ನಾಯಕರು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂದಿ ಅವರನ್ನು ಭೇಟಿಯಾಗಿ ಚರ್ಚಿಸಿದ ಬಳಿಕ ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ನಡುವೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರು  ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಬೆಳಗ್ಗೆ 11:00 ಗಂಟೆಗೆ ಕಾಂಗ್ರೆಸ್ ಸಚಿವರ ಮತ್ತು ಪಕ್ಷದ ಮುಖಂಡರ ಸಭೆ ಕರೆದಿದ್ದಾರೆ. ಬಳ್ಳಾರಿ ಲೋಕಸಭಾ ಚುನಾವಣೆಗೆ ಅಭ್ಯರ್ಥಿಯ  ಆಯ್ಕೆಯ ಬಗ್ಗೆ  ಸಭೆಯಲ್ಲಿ  ಚರ್ಚೆ ನಡೆಯಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News