‘ತಿತ್ಲಿ’ ಚಂಡಮಾರುತ: ಗುಹೆಯಲ್ಲಿ ಆಶ್ರಯ ಪಡೆದಿದ್ದ 12 ಮಂದಿ ಮೃತ್ಯು

Update: 2018-10-13 10:16 GMT

ಭುವನೇಶ್ವರ, ಅ.13: ಒಡಿಶಾದ ಗಜಪತಿ ಜಿಲ್ಲೆಯಲ್ಲಿ ‘ತಿತ್ಲಿ’ ಚಂಡಮಾರುತದ ಪರಿಣಾಮ ಸುರಿದ ಭಾರೀ ಮಳೆಯಿಂದ ಸಂಭವಿಸಿದ ಭೂಕುಸಿತದಲ್ಲಿ 12 ಮಂದಿ ಮೃತಪಟ್ಟಿದ್ದಾರೆ. ಭಾರೀ ಮಳೆಯಾಗುತ್ತಿದ್ದುದರಿಂದ ಕೆಲ ಗ್ರಾಮಸ್ಥರು ಗುಹೆಯೊಂದರಲ್ಲಿ ಆಶ್ರಯ ಪಡೆದಿದ್ದರು.ಇದೇ ಸಂದರ್ಭ ಈ ಅವಘಡ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ನಾಲ್ವರು ನಾಪತ್ತೆಯಾಗಿದ್ದು, ಇವರೆಲ್ಲರೂ ಅವಶೇಷಗಳಡಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದೆ. ಪರಿಸ್ಥಿತಿಯನ್ನು ಅವಲೋಕಿಸಿದ ನಂತರ ಪರಿಹಾರ ನೀಡಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News