ಕೆಜಿಎಫ್ ಬಿಡುಗಡೆ ಮುಂದೂಡಿಕೆ

Update: 2018-10-13 13:03 GMT

‘ಕೆಜಿಎಫ್’ ಈ ವರ್ಷದ ಬಹುನಿರೀಕ್ಷಿತ ಕನ್ನಡ ಚಿತ್ರಗಳಲ್ಲಿ ಒಂದು. ಆದರೆ, ಅದರ ಬಿಡುಗಡೆ ಮುಂದೂಡಲಾಗಿದೆ. ಈ ನಡುವೆ ‘ದಿ ವಿಲನ್’ ಅಕ್ಟೋಬರ್ 18ರಂದು ಬಿಡುಗಡೆಗೆ ಸಿದ್ಧವಾಗಿದೆ. ಈ ಹಿಂದೆ ‘ಕೆಜಿಎಫ್’ನ್ನು ನವೆಂಬರ್ 16ಕ್ಕೆ ಬಿಡುಗಡೆ ಮಾಡಲಾಗುವುದು ಎಂದು ಹೇಳಲಾಗಿತ್ತು. ಆದರೆ, ಈಗ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಚಿತ್ರ ಡಿಸೆಂಬರ್ 21 ಅಥವಾ ಡಿಸೆಂಬರ್ 28ರಂದು ಬಿಡುಗಡೆಯಾಗಲಿದೆ. ಚಿತ್ರ ಬಿಡುಗಡೆಯನ್ನು ಮುಂದೂಡಿರುವುದಕ್ಕೆ ಕಾರಣ ಏನೆಂದು ತಿಳಿದು ಬಂದಿಲ್ಲ. ಯಶ್ ಅವರಿಗೆ ಡಿಸೆಂಬರ್ ಅದೃಷ್ಟದ ತಿಂಗಳು ಎಂದು ಹೇಳಲಾಗುತ್ತಿದೆ. ಡಿಸೆಂಬರ್ ತಿಂಗಳಲ್ಲಿ ಬಿಡುಗಡೆಯಾಗಿದ್ದ ‘ಮಿಸ್ಟರ್ ಆ್ಯಂಡ್ ಮಿಸೆಸ್ ರಾಮಾಚಾರಿ’ ದೊಡ್ಡ ಮಟ್ಟದಲ್ಲಿ ಹಿಟ್ ಆಗಿತ್ತು. ‘ಕೆಜಿಎಫ್’ ದೊಡ್ಡ ಮಟ್ಟದ ಕ್ರೇಜ್ ಹುಟ್ಟು ಹಾಕಿದೆ. ಟ್ರೈಲರ್ ಅನ್ನು ಅಕ್ಟೋಬರ್ 14ರಂದು ಬಿಡುಗಡೆ ಮಾಡಲು ಎಲ್ಲ ಸಿದ್ಧತೆ ನಡೆದಿದೆ. ಟ್ರೈಲರ್ ಬಗ್ಗೆ ಕೂಡ ತುಂಬಾ ನಿರೀಕ್ಷೆ ಇದೆ. ಈ ಚಿತ್ರ ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News