ಗ್ರಾಪಂ ಮಟ್ಟದ ವಿಪತ್ತು ನಿರ್ವಹಣಾ ತಂಡಗಳ ಜೊತೆ ಕೈಜೋಡಿಸಿ: ಜಿಲ್ಲಾಧಿಕಾರಿ ಪ್ರಿಯಾಂಕ

Update: 2018-10-13 13:49 GMT

ಉಡುಪಿ, ಅ.13: ವಿಪತ್ತು ನಿರ್ವಹಣೆಗಾಗಿ ಉಡುಪಿ ಜಿಲ್ಲೆಯ ಪ್ರತಿ ಯೊಂದು ಗ್ರಾಪಂ ಮಟ್ಟದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ನೇತೃತ್ವ ದಲ್ಲಿ ಸರಕಾರಿ ನೌಕರರ ತಂಡವನ್ನು ರಚಿಸಿದ್ದು, ಸ್ಥಳೀಯ ವಿದ್ಯಾರ್ಥಿಗಳು, ಯುವ ಜನತೆ ಈ ತಂಡವನ್ನು ಸೇರಿಕೊಂಡು ವಿಪತ್ತು ನಿರ್ವಹಣೆ ಕುರಿತು ಅರಿವು ಮೂಡಿಸಿಕೊಳ್ಳಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಹೇಳಿದ್ದಾರೆ.

ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ವಿಶ್ವ ವಿಪತ್ತು ತಗ್ಗಿಸುವ ದಿನಾಚರಣೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳಿಗೆ ಮಣಿಪಾಲ ರಜತಾದ್ರಿಯ ವಾಜಪೇಯಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಲಾದ ವಿಪತ್ತು ನಿರ್ವಹಣೆ ಮತ್ತು ಮಾದಕ ದ್ರವ್ಯ ವ್ಯಸನದ ಕುರಿತ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಯುವ ಪಡೆ ತಮ್ಮ ಗ್ರಾಪಂ ವ್ಯಾಪ್ತಿಯಲ್ಲಿ ಪ್ರಾಕೃತಿಕ ವಿಕೋಪದಿಂದ ಹೆಚ್ಚು ಹಾನಿ ಸಂಭವಿಸುವ ಪ್ರದೇಶಗಳನ್ನು ಗುರುತಿಸಬೇಕು ಮತ್ತು ಅದನ್ನು ತಡೆಯುವ ಕುರಿತು ಆಯಾ ಗ್ರಾಪಂನ ಪಿಡಿಓಗಳ ಜೊತೆ ಚರ್ಚೆ ನಡೆಸಬೇಕು. ಅಲ್ಲದೆ ಗ್ರಾಮಸ್ಥರಲ್ಲಿ ಆ ಕುರಿತು ಅರಿವು ಮೂಡಿಸಬೇಕು.ಪೂರ್ವ ಸಿದ್ಧತೆಗಳಿಂದ ಮಾತ್ರ ಪ್ರಾಕೃತಿಕ ವಿಕೋಪದಿಂದ ಆಗುವ ಹಾನಿಯನ್ನು ಕಡಿಮೆ ಮಾಡಬಹು ದಾಗಿದೆ ಎಂದರು.

ಶಿಕ್ಷಿತ ಜಿಲ್ಲೆಯಾಗಿರುವ ಉಡುಪಿಯ ಯುವ ಜನತೆ ಹಾಗೂ ವಿದ್ಯಾರ್ಥಿ ಗಳಲ್ಲಿ ದುಶ್ಚಟಗಳು ಜಾಸ್ತಿಯಾಗುತ್ತಿವೆ. ಕುತೂಹಲಕ್ಕಾಗಿ ಸೇವಿಸುವ ಮಾದಕ ದ್ರವ್ಯಗಳು ಮುಂದೆ ವ್ಯಸನವಾಗಿ ಪರಿಣಮಿಸಿ ಇಡೀ ಭವಿಷ್ಯವನ್ನೇ ನಾಶ ಮಾಡು ವುದಲ್ಲದೆ ಆತ್ಮಹತ್ಯೆಗೂ ಕಾರಣವಾಗುತ್ತಿದೆ. ಈ ದುಶ್ಚಟಗಳ ವಿರುದ್ಧ ಯುವ ಜನತೆಯೇ ಹೋರಾಡಿ ತಡೆಯುವ ಕೆಲಸ ಮಾಡಬೇಕು ಎಂದು ಅವರು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಕರ್ನಾಟಕ ರಾಜ್ಯ ಶಾಖೆಯ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ, ಸಂಪನ್ಮೂಲ ವ್ಯಕ್ತಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವಿಪತ್ತು ತಂಡ ಮುಖ್ಯಸ್ಥ ಡಾ.ಕುಮಾರ್ ವಿ.ಎಲ್. ಎಸ್. ಉಪಸ್ಥಿತರಿದ್ದರು.

ರೆಡ್ ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ಸಭಾಪತಿ ಡಾ.ಉಮೇಶ್ ಪ್ರಭು ಸ್ವಾಗತಿಸಿದರು. ಉಪಸಭಾಪತಿ ಡಾ.ಅಶೋಕ್ ಕುಮಾರ್ ವೈ.ಜಿ. ಸಂಪ ನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿದರು. ಗೌರವ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಕೆ. ಉಪಸ್ಥಿತರಿದ್ದರು. ಗೌರವ ಖಜಾಂಚಿ ಟಿ.ಚಂದ್ರಶೇಖರ್ ವಂದಿಸಿದರು. ಯುವ ರೆಡ್‌ಕ್ರಾಸ್ ಘಟಕದ ಜಯರಾಮ್ ಆಚಾರ್ಯ ಸಾಲಿಗ್ರಾಮ ಕಾರ್ಯಕ್ರವು ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News