ಬೈಂದೂರು ಕ್ಷೇತ್ರದಲ್ಲಿ ಬಿಜೆಪಿಗೆ 50,000 ಮತಗಳ ಮುನ್ನಡೆ: ಮಟ್ಟಾರ್ ವಿಶ್ವಾಸ

Update: 2018-10-13 13:52 GMT

ಉಡುಪಿ, ಅ.13: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕ್ಷೇತ್ರ ವ್ಯಾಪ್ತಿಗೆ ಬರುವ ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ 50,000 ಮತಗಳ ಮುನ್ನಡೆ ದೊರಕಿಸುವ ಗುರಿಯನ್ನು ಹೊಂದಲಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ತಿಳಿಸಿದ್ದಾರೆ.

ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, 2014ರ ಲೋಕಸಭಾ ಚುನಾವಣೆಯಲ್ಲಿ ಬಿ.ಎಸ್.ಯಡಿ ಯೂರಪ್ಪ ಅವರಿಗೆ ಬೈಂದೂರು ಕ್ಷೇತ್ರದಲ್ಲಿ 42ಸಾವಿರ ಮತಗಳ ಮುನ್ನಡೆ ದೊರೆತಿತ್ತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ 25ಸಾವಿರ ಮತಗಳ ಅಂತರದಲ್ಲಿ ಜಯ ಸಾಧಿಸಿದ್ದರು ಎಂದರು.

ಬಿಜೆಪಿ ಅಭ್ಯರ್ಥಿ ಬಿ.ಎಸ್.ರಾಘವೇಂದ್ರ ಅ.15ರಂದು ನಾಮಪತ್ರ ಸಲ್ಲಿಸ ಲಿದ್ದು, ಈ ಸಂದರ್ಭ ಜಿಲ್ಲೆಯ 500 ಮಂದಿ ಮುಖಂಡರು ಹಾಗೂ ಕಾರ್ಯ ಕರ್ತರು ಭಾಗವಹಿಸಲಿರುವರು. 19ರಂದು ಕೊಲ್ಲೂರಿನಲ್ಲಿ ಬೃಹತ್ ಚುನಾ ವಣಾ ಪ್ರಚಾರ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
 ಈ ಉಪಚುನಾವಣೆಯು ಬೈಂದೂರು ಕ್ಷೇತ್ರಕ್ಕೆ ಸಂಬಂಧಿಸಿರುವುದರಿಂದ ಇಡೀ ಜಿಲ್ಲೆಗೆ ಅನ್ವಯವಾಗುವಂತೆ ಜಾರಿಗೊಳಿಸಿರುವ ನೀತಿ ಸಂಹಿತೆಯನ್ನು ಬೈಂದೂರು ತಾಲೂಕಿಗೆ ಮಾತ್ರ ಸೀಮಿತಗೊಳಿಸಬೇಕು ಎಂದು ಚುನಾವಣಾ ಆಯೋಗಕ್ಕೆ ಪತ್ರ ಬರೆಯಲಾಗಿದೆ. ನೀತಿ ಸಂಹಿತೆಯಿಂದ ಜಿಲ್ಲೆಯಲ್ಲಿ ಅಭಿ ವೃದ್ಧಿ ಕುಂಠಿತಗೊಂಡಿದೆ ಎಂದು ಅವರು ಹೇಳಿದರು.

ಸಿಆರ್‌ಝೆಡ್ ವ್ಯಾಪ್ತಿಯಲ್ಲಿ ಮರಳು ತೆಗೆಯುವ ಬಗ್ಗೆ ಅ.15ರೊಳಗೆ ನಿರ್ಧಾರ ತೆಗೆದುಕೊಂಡು, 16ರೊಳಗೆ ಮರಳು ತೆಗೆಯಲು ಅವಕಾಶ ನೀಡ ದಿದ್ದರೆ, ಜಿಲ್ಲಾಮಟ್ಟದ ಸಭೆ ಕರೆದು ಮುಂದಿನ ಹೋರಾಟದ ಬಗ್ಗೆ ಚರ್ಚಿಸ ಲಾಗುವುದು ಎಂದು ಅವರು ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದರು.

150ನೆ ಗಾಂಧಿ ಜಯಂತಿ ಪ್ರಯುಕ್ತ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 10 ಕಿ.ಮೀ. ಪಾದಯಾತ್ರೆ ನಡೆಸಲು ನಿರ್ಧರಿಸಲಾಗಿದೆ. ಸರ್ದಾರ್ ವಲ್ಲಬಾಯಿ ಪಟೇಲ್ ಜನ್ಮ ದಿನದ ಪ್ರಯುಕ್ತ ಅ.31ರಂದು ಏಕತಾ ಓಟವನ್ನು ಏರ್ಪಡಿಸ ಲಾಗುವುದು ಎಂದು ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಯಶ್ಪಾಲ್ ಸುವರ್ಣ, ಪ್ರಭಾಕರ ಪೂಜಾರಿ, ಕುತ್ಯಾರ್ ನವೀನ್ ಶೆಟ್ಟಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News