ಗರ್ಭಿಣಿಯ ಮೇಲೆ ಸಾಮೂಹಿಕ ಅತ್ಯಾಚಾರ

Update: 2018-10-13 16:31 GMT

ಕೊಲ್ಕತ್ತಾ, ಅ.13: ನಾಲ್ಕು ತಿಂಗಳ ಗರ್ಭಿಣಿಯೊಬ್ಬರನ್ನು ಮೂವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರಗೈದಿರುವ ಘಟನೆ ಪಶ್ಚಿಮ ಬಂಗಾಳದ ಅಸನೋಲ್ ನಗರದಲ್ಲಿ ನಡೆದಿದೆ.

ಮನೆಯಲ್ಲಿ ಮಹಿಳೆ ಒಬ್ಬಂಟಿಯಾಗಿದ್ದ ಸಂದರ್ಭ ಮೂವರು ಬಾಗಿಲು ಬಡಿದಿದ್ದರು. ಕೆಲಸ ಮುಗಿಸಿ ಪತಿ ಮನೆಗೆ ಬಂದಿದ್ದಾರೆಂದು ಭಾವಿಸಿ ಮಹಿಳೆ ಬಾಗಿಲು ತೆರೆದಿದ್ದರು. ಕೂಡಲೇ ಮನೆಯೊಳಕ್ಕೆ ನುಗ್ಗಿದ ದುಷ್ಕರ್ಮಿಗಳು ಅತ್ಯಾಚಾರಗೈದಿದ್ದಾರೆ ಎಂದು ಆರೋಪಿಸಲಾಗಿದೆ.

ಪತಿ ಮನೆಗೆ ಬಂದಾಗ ಮಹಿಳೆ ಪ್ರಜ್ಞಾಹೀನರಾಗಿ ಬಿದ್ದಿರುವುದು ಗಮನಕ್ಕೆ ಬಂದಿದೆ. ದುಷ್ಕರ್ಮಿಗಳಲ್ಲಿ ಒಬ್ಬನನ್ನು ಮಹಿಳೆ ಗುರುತಿಸಿದ್ದಾರೆ. ಸಾಮೂಹಿಕ ಅತ್ಯಾಚಾರ ನಡೆದಿರುವುದು ವೈದ್ಯಕೀಯ ಪರೀಕ್ಷೆಗಳಿಂದ ದೃಢಪಟ್ಟಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News