ಬೈಕ್ ಕಳವು ಪ್ರಕರಣ: ಆರೋಪಿಯ ಬಂಧನ

Update: 2018-10-13 17:14 GMT

ಮಂಗಳೂರು, ಅ.13: ವಿವಿಧ ಬೈಕ್ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ದಕ್ಷಿಣ ಠಾಣೆಯ ಪೊಲೀಸರು ಬಂಧಿಸಿ, ಕಳವುಗೈದ ಎರಡು ಬೈಕ್‌ಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಮೂಲತಃ ಕಾಸರಗೋಡು ಜಿಲ್ಲೆಯ ಕುಂಬ್ಳೆ, ಹಾಲಿ ಕೊರಗಜ್ಜನ ಕಟ್ಟೆಯ ಬಳಿ ಅರಸು ನಗರ ನಿವಾಸಿ ರವೀಂದ್ರ (25) ಬಂಧಿತ ಆರೋಪಿ.

ಪ್ರಕರಣದ ಆರೋಪಿಯ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ಅಪರಾಧ ಪತ್ತೆ ವಿಭಾಗದ ಪೊಲೀಸ್ ಉಪನಿರೀಕ್ಷಕಿ ಮಂಜುಳಾ ಎಲ್. ಆರೋಪಿಯನ್ನು ಬಂಧಿಸಿದ್ದಾರೆ. ಎರಡು ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದ ಸುಮಾರು 75 ಸಾವಿರ ರೂ. ಮೌಲ್ಯದ ಎರಡು ಬೈಕ್‌ಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

ಅ.7ರಂದು ಮಂಗಳೂರು ನಗರದ ಅತ್ತಾವರದ ಉಮಾಮಹೇಶ್ವರ ದೇವಸ್ಥಾನದ ಪಕ್ಕದ ರಸ್ತೆಯಲ್ಲಿ ದಿ ಕರಾವಳಿ ಕ್ರೆಡಿಟ್ ಕೋಪರೇಟಿವ್ ಸೊಸೈಟಿಯ ಹಿಂಬದಿ ಪಾರ್ಕ್ ಮಾಡಿದ್ದ ಪ್ರಮೋದ್ ಎಂಬವರಿಗೆ ಸೇರಿದ ಬೈಕ್ ಕಳವಾಗಿತ್ತು. ಈ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಜೊತೆಗೆ ಆರೋಪಿ ವಿರುದ್ಧ ಕಾಸರಗೋಡು ಜಿಲ್ಲೆಯ ಕುಂಬ್ಳೆ ಪೊಲೀಸ್ ಠಾಣೆಯಲ್ಲಿ 1 ದ್ವಿಚಕ್ರ ವಾಹನ ಕಳವು ಪ್ರಕರಣ ಹಾಗೂ ಪೋಕ್ಸೋ ಕಾಯ್ದೆಯಡಿ ಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣವು ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ.

ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಹನುಮಂತರಾಯ, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಉಮಾ ಪ್ರಶಾಂತ್ ಹಾಗೂ ಮಂಗಳೂರು ಸೆಂಟ್ರಲ್ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಭಾಸ್ಕರ್ ವಿ.ಬಿ. ಮಾರ್ಗದರ್ಶನದಲ್ಲಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮುಹಮ್ಮದ್ ಶರೀಫ್ ನಿದೇರ್ಶನದಂತೆ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ಅಪರಾಧ ಪತ್ತೆ ವಿಭಾಗದ ಪೊಲೀಸ್ ಉಪನಿರೀಕ್ಷಕಿ ಮಂಜುಳಾ ಎಲ್. ಮಂಗಳೂರು ದಕ್ಷಿಣ ಠಾಣೆಯ ಅಪರಾಧ ಪತ್ತೆ ವಿಭಾಗದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News