ಪಿ.ಎ.ಕಾಲೇಜ್: ಎಂಬಿಎ ಪದವಿ ತರಗತಿಗಳ ಉದ್ಘಾಟನಾ ಸಮಾರಂಭ

Update: 2018-10-14 12:18 GMT

ಮಂಗಳೂರು, ಅ. 14: ಪಿ.ಎ. ಕಾಲೇಜಿನಲ್ಲಿ ಎಂಬಿಎ ಪದವಿ ತರಗತಿಗಳ ಉದ್ಘಾಟನಾ ಸಮಾರಂಭ ಇತ್ತೀಚೆಗೆ ನಡೆಯಿತು.

ನಿರ್ವಹಣಾ ಕ್ಷೇತ್ರದಲ್ಲಿ ಉತ್ತಮ ಭವಿಷ್ಯ ರೂಪಿಸಲು ಸೃಜನಶೀಲತೆ, ಪ್ರೇರಣೆ, ಉತ್ಪಾದಕತೆ, ವಿಶ್ವಾಸ, ಸಮರ್ಪಣೆ ಮತ್ತು ತಂತ್ರಜ್ಞಾನದ ತಿಳುವಳಿಕೆ ಅಗತ್ಯವಾಗಿದೆ. ಆದ್ದರಿಂದ ವಿದ್ಯಾರ್ಥಿಗಳು ಸತತ ಪರಿಶ್ರಮದೊಂದಿಗೆ ಜೀವನದಲ್ಲಿ ಯಶಸ್ಸಿನೆಡೆಗೆ ಸಾಗಬೇಕು ಎಂದು ಸುರತ್ಕಲ್ ಎನ್‍ಐಟಿಕೆಯ ಡೀನ್ ಡಾ. ಅಲೋಸಿಯಸ್ ಹೆನ್ರಿ ಸಿಕ್ವೇರಾ ಅವರು ಹೇಳಿದರು.

ಅವರು ನಡುಪದವು ಪಿ.ಎ.ಕಾಲೇಜಿನ ಸೆಂಟರ್ ಫಾರ್ ಮ್ಯಾನೇಜ್‍ಮೆಂಟ್ ಸ್ಟಡೀಸ್ ಆ್ಯಂಡ್ ರಿಸರ್ಚ್ ಇದರ 2018-19ನೇ ಸಾಲಿನ ಶೈಕ್ಷಣಿಕ ವರ್ಷದ ಎಂಬಿಎ ಪದವಿ ತರಗತಿಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ.ಅಬ್ದುಲ್ ಶರೀಫ್ ಅವರು, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ನೈತಿಕ ಮತ್ತು ಮಾನವೀಯ ಮೌಲ್ಯಗಳನ್ನು ನಾವು ಗೌರವಿಸುತ್ತಾ ಮುನ್ನಡೆದು ನಮ್ಮ ಶೈಕ್ಷಣಿಕ ಅವಧಿಯಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದು ಹೇಳಿದರು.

ಕಾಲೇಜಿನ ಉಪಪ್ರಾಂಶುಪಾಲ ಡಾ. ರಮೀಝ್ ಎಂ.ಕೆ, ಪಿ.ಎ.ಸಮೂಹ ಸಂಸ್ಥೆಗಳ ಶೈಕ್ಷಣಿಕ ನಿರ್ದೇಶಕ ಪ್ರೊ.ಸರ್ಫ್ರಾಝ್ ಹಾಸಿಂ, ಹಣಕಾಸು ನಿರ್ದೇಶಕರಾದ ಅಹ್ಮದ್ ಕುಟ್ಟಿ, ಸರ್ಫುದ್ದೀನ್ ಮೊದಲಾದವರು ಉಪಸ್ಥಿತರಿದ್ದರು.

ಎಂಬಿಎ ವಿಭಾಗದ ನಿರ್ದೇಶಕರಾದ ಡಾ.ಲತಾ ಕೃಷ್ಣನ್ ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕಿ ಪ್ರೊ.ಶಮಾ ಅಬ್ಬಾಸ್ ವಂದಿಸಿದರು. ರುಹ್ಮಾ ಆಯಿಷಾ ಕಾರ್ಯಕ್ರಮ ನಿರೂಪಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News