ವೈದ್ಯಕೀಯ ಕ್ಷೇತ್ರದ ಪ್ರಗತಿಯಿಂದ ಜೀವಿತಾವಧಿ ವೃದ್ಧಿ: ಆಸ್ಕರ್ ಫೆರ್ನಾಂಡಿಸ್

Update: 2018-10-14 13:51 GMT

ಉಡುಪಿ, ಅ.14: ವೈದ್ಯಕೀಯ ಕ್ಷೇತ್ರವು ಆಧುನಿಕ ತಂತ್ರಜ್ಞಾನದೊಂದಿಗೆ ಬೆಳೆಯುತ್ತಿದ್ದು, ಸ್ವಾತಂತ್ರ್ಯ ಪೂರ್ವದಲ್ಲಿ ಮನುಷ್ಯನ ಜೀವಿತಾವಧಿ ಸರಾಸರಿ 35 ವರ್ಷ ಇದ್ದರೆ, ಈಗ ಅದು 65, 70ವರ್ಷಕ್ಕೆ ಏರಿಕೆಯಾಗಿದೆ. ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಮನುಷ್ಯನ ಸರಾಸರಿ ಜೀವಿತಾವಧಿ 90 ವರ್ಷಕ್ಕೆ ತಲುಪಿದೆ ಎಂದು ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಹೇಳಿದ್ದಾರೆ.

ಉಡುಪಿ ಆದರ್ಶ ಆಸ್ಪತ್ರೆಯಲ್ಲಿ ರವಿವಾರ ನಡೆದ ನೂತನವಾಗಿ ಅಳವಡಿಸ ಲಾದ ಆಧುನಿಕ ಮಾದರಿಯ ಎಂಆರ್‌ಐ ಸ್ಕ್ಯಾನಿಂಗ್ ಸೆಂಟರ್ ಉದ್ಘಾಟನೆ ಹಾಗೂ ಎನ್‌ಎಬಿಎಚ್ ಎಕ್ರಿಡಿಟೇಶನ್ ಸರ್ಟಿಫಿಕೇಟ್ ಹಸ್ತಾಂತರ ಸಮಾ ರಂಭದಲ್ಲಿ ಭಾವಹಿಸಿ ಅವರು ಮಾತನಾಡುತಿದ್ದರು.

ಎಂಆರ್‌ಐ ಸ್ಕ್ಯಾನಿಂಗ್ ಸೆಂಟರ್ ಉದ್ಘಾಟಿಸಿದ ಅದಮಾರು ಮಠಾಧೀಶ ಶ್ರೀವಿಶ್ವಪ್ರಿಯ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿ, ಹೊಟ್ಟೆಗೆ ಬೇಕಾಗುವ ಆಹಾರಕ್ಕಿಂತ ಅತೀಯಾದ ಆಹಾರ ಸೇವಿಸುತ್ತಿರುವುದೇ ವಿವಿಧ ಖಾಯಿಲೆಗಳಿಗೆ ಮೂಲ ಕಾರಣವಾಗಿದೆ. ಆದುದರಿಂದ ನಾವು ನಮ್ಮ ಆರೋಗ್ಯ ಮತ್ತು ರೋಗ ವನ್ನು ನಿಯಂತ್ರಿಸಿ ದೇಹವನ್ನು ಹತೋಟಿಯಲ್ಲಿಟ್ಟುಕೊಳ್ಳಬೇಕು ಎಂದರು.

ಗುಣಮಟ್ಟದ ಆರೋಗ್ಯ ಸೇವೆಗಾಗಿ ನ್ಯಾಶನಲ್ ಎಕ್ರಿಡೇಶನ್ ಬೋರ್ಡ್ ಫಾರ್ ಹಾಸ್ಪಿಟಲ್ಸ್ ನೀಡುವ ಪ್ರಮಾಣಪತ್ರವನ್ನು ಆಸ್ಪತ್ರೆ ವೈದ್ಯಕೀಯ ನಿರ್ದೇಶಕ ಡಾ.ಜಿ.ಎಸ್ ಚಂದ್ರಶೇಖರ್ ಅವರಿಗೆ ಹಸ್ತಾಂತರಿಸಲಾಯಿತು.

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ್ ಪೂಜಾರಿ, ಶಾಸಕ ಲಾಲಾಜಿ ಮೆಂಡನ್, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಸಿಂಡಿಕೇಟ್ ಬ್ಯಾಂಕ್‌ನ ಜನರಲ್ ಮ್ಯಾನೇಜರ್ ಭಾಸ್ಕರ ಹಂದೆ, ಜಾರ್ಜ್ ಡಿ.ಆಲ್ಮೇಡಾ, ಜಿಪಂ ಸದಸ್ಯೆ ಗೀತಾಂಜಲಿ ಸುವರ್ಣ, ಬ್ಲೊ ಸಂ ಫೆರ್ನಾಂಡಿಸ್ ಉಪಸ್ಥಿತರಿದ್ದರು. ಆಸ್ಪತ್ರೆಯ ಮ್ಯಾನೇಜರ್ ಕಾವ್ಯಾಶ್ರೀ ವಂದಿಸಿದರು. ಡಿಯಾಗೋ ಕಾವಡ್ರಸ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News