ಶಕ್ತಿ ಕ್ಯಾನ್ ಕ್ರಿಯೇಟ್ ಶಿಬಿರದ ಸಮಾರೋಪ

Update: 2018-10-14 15:09 GMT

ಮಂಗಳೂರು, ಅ.14: ಶಕ್ತಿ ವಸತಿ ಶಾಲೆ ಮತ್ತು ಶಕ್ತಿ ಪದವಿ ಪೂರ್ವ ಕಾಲೇಜಿನ ವತಿಯಿಂದ ಆಯೋಜಿಸಲಾಗಿರುವ 6 ದಿನದ ಶಕ್ತಿ ಕ್ಯಾನ್ ಕ್ರಿಯೇಟ್ ಶಿಬಿರದ ಸಮಾರೋಪ ಸಮಾರಂಭವು ರವಿವಾರ ಶಕ್ತಿ ವಸತಿ ಶಾಲೆಯ ಮೈದಾನದಲ್ಲಿ ಜರುಗಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲು ಮಕ್ಕಳಲ್ಲಿ ಕ್ರಿಯಾತ್ಮಕ ಹಾಗೂ ಸೃಜನಾತ್ಮಕವಾದ ಬದಲಾವಣೆಯಾಗಲು ಶಕ್ತಿ ಕ್ಯಾನ್ ಕ್ರಿಯೇಟ್ ಸಹಾಯಕವಾಗಿದೆ. ಮಕ್ಕಳು ಕ್ರಿಯಾತ್ಮಕವಾಗಿ ತಯಾರು ಮಾಡಿರುವ ವಸ್ತುಗಳ ಪ್ರದರ್ಶನ ನೋಡಿದಾಗ ಶಿಬಿರವು ಯಶಸ್ವಿಯಾಗಿದೆ ಎಂಬುವುದರಲ್ಲಿ ಸಂದೇಹವಿಲ್ಲ. ಅನೇಕ ಶಾಲೆಯ ಮಕ್ಕಳು ಒಂದು ಕಡೆ ಸೇರಿದಾಗ ಅವರು ಸ್ನೇಹಿತರಾಗುತ್ತಾರೆ. ಇದು ಅವರ ಬದಲಾವಣೆಗೆ ಮಾರ್ಗದರ್ಶನ ನೀಡುತ್ತದೆ ಎಂದರು.

ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು ಮಾತನಾಡಿದರು. ಶಕ್ತಿ ಕ್ಯಾನ್ ಕ್ರಿಯೇಟ್‌ನ ಆಡಳಿತಾಧಿಕಾರಿ ಬೈಕಾಡಿ ಜನಾರ್ದನ ಆಚಾರ್ ಸಮಾರೋಪ ಮಾತುಗಳನ್ನಾಡಿದರು. ಆಡಳಿತ ಮಂಡಳಿಯ ಸದಸ್ಯೆ ಸಗುಣಾ ಸಿ. ನಾಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ.ಸಿ. ನಾಕ್, ಶಕ್ತಿ ಎಜುಕೇಶನ್ ಟ್ರಸ್ಟ್‌ನ ಟ್ರಸ್ಟಿ ಡಾ. ಮುರುಳೀಧರ್ ನಾಕ್, ಪ್ರಧಾನ ಸಲಹೆಗಾರ ರಮೇಶ ಕೆ., ಶಕ್ತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಭಾಕರ ಜಿ.ಎಸ್, ಅಭಿವೃದ್ಧಿ ಅಧಿಕಾರಿ ನಸೀಮ್ ಬಾನು ಉಪಸ್ಥಿತರಿದ್ದರು. 

ವಿದ್ಯಾರ್ಥಿಗಳಾದ ವೈಷ್ಣ ಕುಲಾಲ್ ಮತ್ತು ಗೌತಮಿ ಎಸ್. ಕುಲಾಲ್ ಕಾರ್ಯಕ್ರಮ ನಿರೂಪಿಸಿದರು. ತಸ್ಸಾ ಸ್ವಾಗತಿಸಿದರು. ಮೇಘನಾ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News